ಚಿತ್ರದುರ್ಗ. ಜುಲೈ. 01: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜುಲೈ 03ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕ (ತರಕಾರಿ) ಡಾ. ಪ್ರಕಾಶ್ ಕೆರೂರೆ ಅವರು ಈರುಳ್ಳಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ಮಾಹಿತಿ ನೀಡುವರು.
ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ ಟಿ ರುದ್ರಮುನಿ ಅವರು, ಈರುಳ್ಳಿ ಬೆಳೆಯಲ್ಲಿ ಬರುವ ಪ್ರಮುಖ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಮಾಹಿತಿ ನೀಡುವರು. ತದನಂತರ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಈರುಳ್ಳಿ ತಾಕಿಗೆ ಕ್ಷೇತ್ರ ಭೇಟಿಯನ್ನು ಮಾಡಲಾಗುವುದು.
ಆದ ಪ್ರಯುಕ್ತ ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ಈ ತರಬೇತಿಯ ಸದುಪಯೋಗ ಪಡೆಯಬೇಕು. ಮೊದಲು ನೋಂದಾವಣಿ ಮಾಡಿಕೊಂಡ 50 ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಆಧಾರ್ ಕಾರ್ಡನೊಂದಿಗೆ ತರಬೇತಿಗೆ ಹಾಜರಾಗಬೇಕು ಎಂದು ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಹೇಳಿದರು.

