Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಮಾರ್ಚ್ 28ರಂದು ಅಡಿಕೆ ಸಿಪ್ಪೆ ಕಾಂಪೋಸ್ಟ್ ತಯಾರಿಕೆ ಕುರಿತು ತರಬೇತಿ

---Advertisement---

 

 

ಚಿತ್ರದುರ್ಗ. ಮಾರ್ಚ್25: ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ ಕುರಿತು ಇದೇ ಮಾರ್ಚ್ 28ರಂದು ಬೆಳಿಗ್ಗೆ 10ಕ್ಕೆ ಹೊಳಲ್ಕೆರೆ ತಾಲ್ಲೂಕಿನ ತಾಳ್ಯ ಹೋಬಳಿಯ ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಿದ್ದು, ಚಿತ್ರದುರ್ಗ ಜಿಲ್ಲೆಯ ಆಸಕ್ತ ರೈತರಿಗೆ ಆಧುನಿಕ ಕೃಷಿ ಪದ್ಧತಿಗಳ ಬಗ್ಗೆ ಮಾಹಿತಿ ನೀಡಲಾಗುವುದು.
ತರಬೇತಿ ಕಾರ್ಯಕ್ರಮದಲ್ಲಿ ತುಮಕೂರಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈವೆಟ್ ಲಿಮಿಟೆಡ್‍ನ ತಾಂತ್ರಿಕ ಅಧಿಕಾರಿ ಕುಮಾರ್ ಅವರು ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೊಸ್ಟ್ ತಯಾರಿಕೆ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ಮೂಲಕ ತೋರಿಸಿ ಕೊಡಲಿದ್ದಾರೆ.

 

ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಸಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು. ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಲು ಮನವಿ ಮಾಡಲಾಗಿದೆ. ನೋಂದಣಿಯಾಗಿ ತರಬೇತಿಯಲ್ಲಿ ಭಾಗವಹಿಸುವ ರೈತ ಬಾಂಧವರಿಗೆ ಅಡಿಕೆ ಸಿಪ್ಪೆ ಕಾಂಪೋಸ್ಟ್ ಕಲ್ಚರ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Join WhatsApp

Join Now

Join Telegram

Join Now