ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಜೂ.10: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತುಮಕೂರಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈ ಲಿಮಿಟೆಡ್ ಸಹಭಾಗಿತ್ವದಲ್ಲಿ ಇದೇ ಜೂನ್ 12ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿಕಾ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ತುಮಕೂರಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈ ಲಿ, ತಾಂತ್ರಿಕ ಮುಖ್ಯಸ್ಥ ಎಸ್.ಕುಮಾರ್ ಅವರು ಸಾವಯವ ಕೃಷಿಯ ಅಗತ್ಯತೆ ಮತ್ತು ಅನುಕೂ¯ಗಳು ಹಾಗೂ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕಗಳ ಬಳಕೆ ಬಗ್ಗೆ ವಿಷಯ ಮಂಡನೆ ಮಾಡುವರು.
ಭರಮಸಾಗರದ ಪ್ರಗತಿಪರ ರೈತರಾದ ಲೋಕೇಶ್ ಅವರು ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿಕೆಯ ತಮ್ಮ ಅನುಭವ ಹಂಚಿಕೊಳ್ಳುವರು ಹಾಗೂ ಕಾಂಪೋಷ್ಟ್ ಮಾಡುವ ಅಣು ಜೀವಿ ಗೊಬ್ಬರವನ್ನು ಬಳಸಿ ಪ್ರಾತ್ಯಕ್ಷಿಕೆಯ ಮೂಲಕ ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿಕೆಯ ವಿಧಾನವನ್ನು ತೋರಿಸಲಾಗುವುದು. ಆದ ಪ್ರಯುಕ್ತ ಆಸಕ್ತ 70 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಮೊದಲು ನೋಂದಾವಣಿ ಮಾಡಿಕೊಂಡ 70 ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡನೊಂದಿಗೆ ತರಬೇತಿಗೆ ಹಾಜರಾಗಲು ವಿನಂತಿಸಿದೆ. ನೋಂದಾಯಿಸಿಕೊಂಡು ತರಬೇತಿಗೆ ಹಾಜರಾಗುವ ಆಸಕ್ತ ರೈತರಿಗೆ ತರಬೇತಿಯ ಕೊನೆಯಲ್ಲಿ ಕಾಂಪೋಷ್ಟ್ ಮಾಡುವ ಅಣು ಜೀವಿ ಗೊಬ್ಬರವನ್ನು ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್