Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂ.28ರಂದು ಕೃಷಿಯಲ್ಲಿ ನ್ಯಾನೋ ಯುರಿಯಾ, ಡಿಎಪಿ ಹಾಗೂ ಡ್ರೋಣ್ ಬಳಕೆ ಕುರಿತು ತರಬೇತಿ

---Advertisement---

ಚಿತ್ರದುರ್ಗ. ಜೂ.26: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜೂನ್ 28ರಂದು ಬೆಳಿಗ್ಗೆ 10ಕ್ಕೆ ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ರೈತರಿಗೆ ಕೃಷಿಯಲ್ಲಿ ನ್ಯಾನೋಯುರಿಯಾ, ನ್ಯಾನೋ ಡಿಎಪಿ ಹಾಗೂ ಡ್ರೋಣ್ ಬಳಕೆ ಕುರಿತು ಒಂದು ದಿನದತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇಫ್ಕೋ ಸಂಸ್ಥೆಯ ಕ್ಷೇತ್ರ ಅಧಿಕಾರಿ ಚಿದಂಬರಮೂರ್ತಿ ಕುಲಕರ್ಣಿ ಅವರು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ನ್ಯಾನೋಯುರಿಯಾ ನ್ಯಾನೋ ಡಿಎಪಿ ಬಳಕೆಯ ಮಹತ್ವ ಹಾಗೂ ವಿವಿಧ ಕೃಷಿ ಮತ್ತುತೋಟಗಾರಿಕೆ ಬೆಳೆಗಳಲ್ಲಿ ಪೋಷಕಾಂಶ ಮತ್ತು ಪೀಡೆನಾಶಕ ಸಿಂಪರಣೆಗೆ ಡ್ರೋಣ್ ಬಳಸುವ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ನಂತರ  ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಪೋಷಕಾಂಶ ಮತ್ತು ಪೀಡೆನಾಶಕ ಸಿಂಪರಣೆಗೆ ಡ್ರೋಣ್ ಬಳಕೆಯ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ 50 ಜನರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಹಾಗೂ ಮುಖ್ಯಸ್ಥ ಆರ್.ರಜನೀಕಾಂತ ತಿಳಿಸಿದ್ದಾರೆ.

ಮೊದಲು ನೋಂದಾವಣಿ ಮಾಡಿಕೊಂಡ 50 ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್‍ನೊಂದಿಗೆ ತರಬೇತಿಗೆ ಹಾಜರಾಗಬೇಕು ಎಂದು ಕೋರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment