ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯನ್ನುಕಡ್ಡಾಯವಾಗಿ ಬಳಸಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದರು.ಪ್ರತಿ ಶಾಖೆಯಲ್ಲಿ ಕನ್ನಡದಲ್ಲಿ ವ್ಯವಹರಿಸುವ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಿಸಬೇಕು. ತಮ್ಮ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿ ಈ ನಿಯಮಗಳು ಪಾಲನೆಯಾಗುತ್ತಿರುವ ಕುರಿತು ಜಿಲ್ಲಾ ಮಟ್ಟದ ಬ್ಯಾಂಕ್ ಸಮನ್ವಯಾಧಿಕಾರಿಗಳು ಮತ್ತು ಪ್ರತಿನಿಧಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದ್ದಾರೆ.
ಬ್ಯಾಂಕಿನ ಎಲ್ಲಾ ಅರ್ಜಿಗಳು, ಚಲನ್ ಮತ್ತು ಸುತ್ತೋಲೆಗಳು ಇಂಗ್ಲಿಷ ಮತ್ತು ಹಿಂದಿಯೊಂದಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆಯಲ್ಲಿ ಲಭ್ಯವಿರಬೇಕು.ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಅನ್ಯ ಭಾಷಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ, ಸಿಬ್ಬಂದಿಗಳಾಗಿ ಬರುವುದರಿಂದ, ಇಲ್ಲಿನ ಜನಸಾಮಾನ್ಯರಿಗೆ ಅವರೊಂದಿಗಿನ ಬ್ಯಾಂಕ್ ವ್ಯವಹಾರಗಳು ಕಷ್ಟಕರವಾಗಿದೆ. ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯ ಚಲನ್‍ಗಳು ಮತ್ತು ನಮೂನೆಗಳು ಲಭ್ಯವಿರಬೇಕು. ಕನ್ನಡದಲ್ಲಿ ವಿಜ್ಞಾನ ಬೋಧಿಸುವ ಕಾಲೇಜುಗಳು ಪ್ರಾರಂಭಿಸಬೇಕು. ನ್ಯಾಯಾಲಯಗಳಲ್ಲಿ ವಕಾಲತ್ತು ಕನ್ನಡದಲ್ಲಿ ಹಾಕಿಸಬೇಕು ಎಂದು ಸಲಹೆ ನೀಡಲಾಗಿದೆ.
ರಾಜ್ಯದ ಬ್ಯಾಂಕುಗಳಲ್ಲಿ ಉದ್ಯೋಗಿಗಳು ಸ್ಥಳೀಯ ಗ್ರಾಹಕರೊಂದಿಗೆ ಕನ್ನಡದಲ್ಲಿ ವ್ಯವಹರಿಸುವುದನ್ನು ಕಡ್ಡಾಯಗೊಳಿಸುವುದೂ ಸೇರಿದಂತೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ-2022’ರಲ್ಲಿನ ಎಲ್ಲ ಅಂಶಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















