ಬೆಂಗಳೂರು: ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ರೋಹಿಣಿ ಸಿಂಧೂರಿ ಅವರು ನಿರ್ವಹಣೆ ಮಾಡುತ್ತಿದ್ದಂತ ವಾಣಿಜ್ಯಮತ್ತು ಕೈಗಾರಿಕಾ ಇಲಾಖೆ (ಗಣಿ) ಕಾರ್ಯದರ್ಶಿ ಹುದ್ದೆಯಿಂದ ಬದಲಾವಣೆ ಮಾಡಲಾಗಿದೆ. ಬೇರೆ ಐಎಎಸ್ ಅಧಿಕಾರಿಯನ್ನ ನೇಮಕ ಮಾಡಲಾಗಿದೆ. 2005ನೇ ಬ್ಯಾಚ್ ನ ಹಿರಿಯ ಐಎಎಸ್ ಅಧಿಕಾರಿ ವಿಪುಲ್ ಬನ್ಸಾಲ್ ಅವರಿಗೆ ಗಣಿ ಹುದ್ದೆಯನ್ನ ನೀಡಲಾಗಿದೆ.
ಗಣಿ ವಿಭಾಗಕ್ಕೆ ಕಳೆದ ವರ್ಷ ಅಂದ್ರೆ 2025ರ ಅಕ್ಟೋಬರ್ 10ರಂದು ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಲಾಗಿತ್ತು. ಈಗ ವಿಪುಲ್ ಬನ್ಸಾಲ್ ಅವರನ್ನು ನೇಮಕ ಮಾಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ.ಬಸವರಾಜು ಅವರು ವರ್ಗಾವಣೆಯಾಗಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ಹಾಲಿ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಆಗಿದ್ದಂತ ಡಾ.ಕೆಎನ್ ಅನುರಾಧ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅನುರಾಧ ಅವರಿಗೆ ಹೆಚ್ಚಿನ ಜವಬ್ದಾರಿಯಾಗಿ ಜಿಪಂ ಸಿಇಒ ಆಗಿನೂ ಮುಂದುವರೆಯುವಂತೆ ಸೂಚನೆ ನೀಡಿದ್ದಾರೆ.
ಇನ್ನು ಬೆಂಗಳೂರಿನ ಕಾರ್ಮಿಕ ಇಲಾಖೆಯ ಅರಣ್ಯ ಉಪ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ವೈ.ಕೆ ಅವರಿಗೆ ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಜವಬ್ದಾರಿ ನೀಡಲಾಗಿದೆ. ಐಎಎಸ್ ಅಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ಹೆಚ್ಚುವರಿ ಹೊಣೆಯಿಂದ ಬಿಡುಗಡೆ ಮಾಡಲಾಗಿದೆ. ಹೀಗೆ ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ಮಾಡಲಾಗಿದೆ. ರಾಜ್ಯ ಸರ್ಕಾರ ಸದ್ಯ ಈ ಆದೇಶವನ್ನ ಹೊರಡಿಸಿದೆ.










