Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ವರ್ಗಾವಣೆ ; ಸಾರ್ವಜನಿಕರ ಪ್ರತಿಭಟನೆ, ಮನವಿ

---Advertisement---

 

                       ವರದಿ ಮತ್ತು ಫೋಟೋ ಕೃಪೆ                          ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಫೆ.27): ಗೋಪಾಲಪುರ ರಸ್ತೆಯ ಮಾರುತಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಮಂಜುನಾಥ್‍ರವರನ್ನು ಏಕಾಏಕಿ ವರ್ಗಾವಣೆಗೊಳಿಸಿರುವುದನ್ನು ವಿರೋಧಿಸಿ ಸ್ಪೂರ್ತಿ ವಿನಾಯಕ ಸೇವಾ ಸಾಂಸ್ಕೃತಿಕ ಕಲಾ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕಳೆದ ನಾಲ್ಕೈದು ವರ್ಷಗಳಿಂದ ಇಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಮಂಜುನಾಥ್ ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ರೋಗಿಗಳಿಗೆ ಚಿಕಿತ್ಸೆ ನೀಡಿ ಬಡವರ ವೈದ್ಯರೆಂದೆ ಪ್ರಸಿದ್ದಿಯಾಗಿದ್ದರು.

ಇವರ ವರ್ಗಾವಣೆಯಿಂದ ಭೋವಿ ಕಾಲೋನಿ, ಮಾರುತಿ ನಗರ, ಆಜಾದ್ ನಗರ, ಹಿಮ್ಮತ್‍ನಗರ, ಗೋಪಾಲಪುರ, ದರ್ಜಿ ಕಾಲೋನಿಯ ಬಡವರು ಚಿಕಿತ್ಸೆ ಪಡೆದುಕೊಳ್ಳಲು ಪರದಾಡುವಂತಾಗಿದೆ. ಹಾಗಾಗಿ ಡಾ.ಮಂಜುನಾಥ್‍ರವರ ವರ್ಗಾವಣೆಯನ್ನು ರದ್ದುಪಡಿಸಿ ಪುನಃ ಅಲ್ಲಿಗೆ ನೇಮಕಗೊಳಿಸುವಂತೆ ಪ್ರತಿಭಟನಕಾರರು ಒತ್ತಾಯಿಸಿದರು.

ಎನ್.ಚಂದ್ರಶೇಖರ್, ಸಂದೀಪ್, ಉದಯಪ್ರಸಾದ್, ರವಿಕುಮಾರ್, ಕೆ.ಬಿ.ಶ್ರೀನಿವಾಸ್, ವೆಂಕಟೇಶ್, ಎಂ.ಡಿ.ಸಾಧಿಕ್, ಕಮ್ರಾನ್, ಭೀಮಪ್ಪ, ಗಾಯಿತ್ರಮ್ಮ, ಹನುಮಂತಮ್ಮ, ಸಾದತ್, ಸಲ್ಮಾನ್ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment