Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಐಎಎಸ್ ಅಧಿಕಾರಿಗಳಿಗೆ ವರ್ಗಾವಣೆ : ಡಿ ರೂಪಾಗೆ ಪ್ರಮುಖ ಹುದ್ದೆ, ರೋಹಿಣಿ ಸಿಂಧೂರಿ ವರ್ಗಾವಣೆ..!

---Advertisement---

 

ಬೆಂಗಳೂರು; ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾದೇಶಿಕ ಆಯುಕ್ತ ಬೆಳಗಾವಿ ವಿಭಾಗಕ್ಕೆ ಶೆಟ್ಟನ್ನವರಗ ಎಸ್ ಬಿ ಅವರನ್ನು ವರ್ಗಾವಣೆ ಮಾಡಲಾಗಿದೆ. 2008ರ ಭಾರತೀಯ ಆಡಳಿತ ಸೇವೆಯ ಅಧಿಕಾರಿ ಶೆಟ್ಟನ್ನನವರ್ ಎಸ್.ಬಿ ಅವರನ್ನು ಖಾಕಿ ಇರುವ ಪ್ರಾದೇಶಿಕ ಆಯುಕ್ತ ಬೆಳಗಾವಿ ವಿಭಾಗಕ್ಕೆ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹಾಗೇ ರೋಹಿಣಿ ಸಿಂಧೂರಿ ಅವರನ್ನು ಕೃಷಿ ಇಲಾಖಡ ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ ಇಲಾಖೆಯಿಂದ ಕೂಡ ವರ್ಗಾವಣೆ ಮಾಡಲಾಗಿದೆ. 2009ರ ಬ್ಯಾಚ್ ನ ಕರ್ನಾಟಕ ಕೇಡರ್ ಗೆ ಸೇರಿದ ಭಾರತೀಯ ಆಡಳಿಯ ಸೇವೆಯ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಕೃಷಿ ಇಲಾಖೆ – ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಕಾರ್ಮಿಕ ಇಲಾಖೆ ಕಾರ್ಯದರ್ಶಿಯಾಗಿ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕೊನೆಗೂ ಐಪಿಎಸ್ ಅಧಿಕಾರಿ ಡಿ.ರೂಪಾಗೆ ಪ್ರಮುಖ ಹುದ್ದೆ ಕೊಟ್ಟ ಸರ್ಕಾರ ಬಿಎಂಟಿಎಫ್ ಗೆ ವರ್ಗಾಯಿಸಿ ಆದೇಶ ನಿಡೀದೆ. ಜನೋಯೋಗಿ ಕೆಲಸಗಳಲ್ಲಿಯೂ ಅತ್ಯಂತ ಪ್ರಮುಖ ಜವಾಬ್ದಾರಿಯನ್ನು ಬಿಎಂ ಟಿಎಫ್ ಗೆ ಸರಕಾರ ನೀಡಿದೆ. ನ್ಯಾಯವಾಗಿ ತಮಗೆ ಸಿಗಬೇಕಾದ ಬಡ್ತಿ ನೀಡುವ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ರೂಪಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಅವರಿಗೆ ಬೇಕಾದ ಪ್ರಮುಖ ಹುದ್ದೆಯೇ ಸಿಕ್ಕಿದೆ.

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಅಕ್ರಮ್ ಪಾಷ ಅವರನ್ನು ವರ್ಗಾವಣೆ ಮಾಡಲಾಗಿದೆ. ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಅವರನ್ನು ನೇಮಕ ಮಾಡಿ, ಸರ್ಕಾತ ಆದೇಶ ಹೊರಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment