Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಟ್ರಾನ್ಸ್‌ಜೆಂಡರ್ ತಿದ್ದುಪಡಿ-2026 ಮಸೂದೆಗೆ ವಿರೋಧ: ಚಿತ್ರದುರ್ಗದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಆಕ್ರೋಶ, ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಕೇಂದ್ರ ಸರ್ಕಾರ ಹೊರಡಿಸಿರುವ ಟ್ರಾನ್ಸ್‍ಜೆಂಡರ್ ತಿದ್ದುಪಡಿ-2026 ರ ಮಸೂದೆಯನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಶುಕ್ರವಾರ ಮಸೂದೆಯ ಜೆರಾಕ್ಸ್ ಪ್ರತಿಯನ್ನು ದಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಲಿಂಗತ್ವ ನನ್ನ ಆಯ್ಕೆ, ಸ್ವಯಂ ಗುರುತಿಸುವಿಕೆ ಮಾನವ ಹಕ್ಕು ಎಂಬ ಘೋಷಣೆಗಳನ್ನು ಕೂಗಿದ ಮುಂಗಳಮುಖಿಯರು ಕೇಂದ್ರ ಸರ್ಕಾರ ಕೂಡಲೆ ಈ ಮಸೂದೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

 

ಸ್ಪೂರ್ತಿ ಮಾತನಾಡುತ್ತ ವೈದ್ಯಕೀಯ ತಪಾಸಣೆಗೊಳಗಾಗಿ ಕಡ್ಡಾಯವಾಗಿ ಸರ್ಟಿಫಿಕೇಟ್ ಪಡೆಯಬೇಕೆಂದು ಮಸೂದೆ ಹೇಳುತ್ತದೆ. ಬಲವಂತವಾಗಿ ಯಾರನ್ನಾದರೂ ಸಮ್ಮ ಸಮುದಾಯಕ್ಕೆ ಕರೆದುಕೊಂಡರೆ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಲು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಬಿಲ್ ಮಂಡಿಸಿರುವುದು ಲಿಂಗತ್ವ ಅಲ್ಪಸಂಖ್ಯಾತರಿಗೆ ವಿರೋಧಿಯಾಗಿದೆ. ಇದನ್ನು ನಾವುಗಳು ಸಹಿಸುವುದಿಲ್ಲ ಎಂದು ಕಿಡಿಕಾರಿದರು.

 

ಡಾ.ಅರುಂಧತಿ ಮಾತನಾಡಿ 2019 ರಲ್ಲಿದ್ದ ಮಸೂದೆಯಿಂದ ನಮಗೆ ಯಾವುದೇ ತೊಂದರೆಯಿರಲಿಲ್ಲ. ಕೇಂದ್ರ ಸರ್ಕಾರ ಹೊರಡಿಸಿರುವ 2026 ರ ಹೊಸ ಮಸೂದೆ ನಮ್ಮ ಹಕ್ಕುಗಳನ್ನು ಸಂಪೂರ್ಣವಾಗಿ ಕಸಿದುಕೊಳ್ಳುತ್ತಿದೆ. ವೈದ್ಯರ ಮುಂದೆ ಹೋಗಿ ನಮ್ಮ ಲಿಂಗತ್ವವನ್ನು ಪರೀಕ್ಷಿಸಿಕೊಂಡು ಸರ್ಟಿಫಿಕೇಟ್ ಪಡೆಯಬೇಕೆಂದರೆ ಹೇಗೆ ಸಾಧ್ಯ.  ಸ್ವಯಂ ಗುರುತಿಸಿಕೊಳ್ಳುವಿಕೆ ನಮ್ಮ ಜನ್ಮಸಿದ್ದ ಹಕ್ಕು. ಪ್ರಜಾಪ್ರಭುತ್ವದಲ್ಲಿ ಸಮಾನವಾಗಿ ಬದುಕುವ ಹಕ್ಕನ್ನು ಸಂವಿಧಾನ ನೀಡಿದೆ. ಹಾಗಾಗಿ ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಮಸೂದೆಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು.

 

ಡಾ.ಬಿ.ಆರ್.ಅಂಬೇಡ್ಕರ್‍ರವರ ಸಂವಿಧಾನದ ಮೌಲ್ಯವನ್ನು ಎತ್ತಿಹಿಡಿಯುವುದಾಗಿ ದೇಶದ ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ಕೈಯಲ್ಲಿ ಬೆಣ್ಣೆ, ಬಗಲಲ್ಲಿ ದೊಣ್ಣೆ ಎಂಬಂತೆ ಕೇಂದ್ರ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರನ್ನು ಹೊಸ ಮಸೂದೆ ಮೂಲಕ ಕೀಳಾಗಿ ಕಾಣುತ್ತಿರುವುದು ಸರಿಯಲ್ಲ. ತಕ್ಷಣವೆ ಮಸೂದೆಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದರು.
ಚಂದ್ರಮ್ಮ, ಆವಂತಿಕ, ಅಲೈಕ, ಸಾನಿಯ, ಅಮೂಲ್ಯ, ಹರ್ಷಿಣಿ, ಅನು, ನೂತನ, ರೋಜಿ, ಸುಬ್ಬಲಕ್ಷ್ಮಿ, ವಿದ್ಯಾ, ಕೃಷ್ಣವೇಣಿ, ಅಂಬಿ, ಗೌಸಿ, ಸುಗುಣ, ಹೊಳೆಯಪ್ಪಸಾಕ್ಯ ಪ್ರಭಾವತಿ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now