Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರದ ಪರಿಸ್ಥಿತಿಯನ್ನ ಸಾರಿಗೆಯವರು ಅರ್ಥ ಮಾಡಿಕೊಳ್ಳಬೇಕು : ಡಿಕೆಶಿ

---Advertisement---

ಬೆಂಗಳೂರು: ಬರಬೇಕಾಗಿರುವ ಬಾಕಿ ವೇತನವನ್ನು ಕ್ಲಿಯರ್ ಮಾಡದೆ ಇದ್ದರೆ ಇಂದು ಸಂಜೆಯಿಂದಾನೇ ಬಸ್ ಗಳನ್ನ ನಿಲ್ಲಿಸುತ್ತೇವೆ, ಪ್ರತಿಭಟನೆ ನಡೆಸುತ್ತೇವೆ ಎಂದು ಸಾರಿಗೆ ನೌಕರರು ಸರ್ಕಾರಕ್ಕೆ ಎಚ್ಚರಿಕೆಯನ್ನ ನೀಡಿದ್ದಾರೆ. ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಅವರು ಕೂಡ ನಮ್ಮ ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

26 ತಿಂಗಳ ವೇತನ ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ಸದ್ಯ ಅಷ್ಟನ್ನ ಕೊಟ್ಟಿದ್ದಾರಲ್ಲ ಅದಕ್ಕೆ ಸಂತೋಷ ಪಡಬೇಕು. ಸರ್ಕಾರದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರೆಲ್ಲಾ ಸಹಕಾರ ನೋಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಸುಮಾರು 1 ಲಕ್ಷದ 15 ಸಾವಿರ ಸಾರಿಗರ ನೌಕರರ ಜಿಂಬಾಕಿ ವೇತನ ಹಾಗೂ ವೇತನ ಪರಿಷ್ಕರಣೆ ಬೇಡಿಕೆಯನ್ನು ಈಡೇರಿಸುವುದಕ್ಕೆ ಇಂದು ಫ್ರೀಡಂ ಪಾರ್ಕ್ ನಲ್ಲಿ 10 ಸಾವಿರ ನೌಕರರು ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ. ಸದ್ಯ ಬಿಎಂಟಿಸಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಕೆಲವೊಂದು ಜಿಲ್ಲೆಯಲ್ಲಿ ಮಾತ್ರ ಬಸ್ ಗಳ ಸಮಸ್ಯೆಯಾಗಿದರ ಬಿಟ್ಟರೆ ಬೇರೆ ಎಲ್ಲೂ ಕೂಡ ಬಸ್ ಸಮಸ್ಯೆ ಉಂಟಾಗಿಲ್ಲ. ಸಾರಿಗೆ ನೌಕರರು ಹೇಳೋದು ಬೇರೆ. ನಾಲ್ಕು ವರ್ಷಕ್ಕೆ ಒಮ್ಮೆ ವೇತನ ಪರಿಷ್ಕರಣೆ ಮಾಡಬೇಕು ಅಂತ ಇದೆ. ಆದರೆ ಇನ್ನು ಕೂಡ ಸರ್ಕಾರ ಯಾವುದೇ ರೀತಿಯ ವೇತನ ಪರಿಷ್ಕರಣೆ ಮಾಡಿಲ್ಲ. ನಾವೂ 1-1-2024ರಿಂದ ವೇತನ ಪರಿಷ್ಕರಣೆ ಮಾಡಬೇಕು ಅಂತ ಕೇಳ್ತಾ ಇದ್ದೇವ. ಆದರೆ ಸರ್ಕಾರ 1-3-2025ಕ್ಕೆ ಒಪ್ಪಿಕೊಂಡಿದೆ. ಇದು ನಮಗೆ ಆಗಲ್ಲ ನಮ್ಮ ಬೇಡಿಕೆಯನ್ನು ಈಡೇರಿಸಲೇಬೇಕು ಅಂತ ನೌಕರರು ಪಟ್ಟು ಹಿಡಿದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...