Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಲುಮರದ ತಿಮ್ಮಕ್ಕನಿಗೆ ಗೌರವ: ಹಳೇಬೀಡಿನಲ್ಲಿ 25 ಕೋಟಿ ರೂ. ವೆಚ್ಚದ ಭವ್ಯ ಸ್ಮಾರಕ ನಿರ್ಮಾಣ

---Advertisement---

ಸುದ್ದಿಒನ್,ಬೆಂಗಳೂರು,ಮೇ.09:ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ ‘ವೃಕ್ಷಮಾತೆ’ ಸಾಲುಮರದ ತಿಮ್ಮಕ್ಕನವರ ನೆನಪನ್ನು ಚಿರಸ್ಥಾಯಿಯಾಗಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಹಾಸನ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಹಳೇಬೀಡಿನಲ್ಲಿ ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಿಸಲು ಯೋಜಿಸಲಾಗಿದೆ.

ಯುನೆಸ್ಕೊ ವಿಶ್ವ ಪಾರಂಪರಿಕ ತಾಣವಾಗಿರುವ ಹಳೇಬೀಡಿನ ಸುಮಾರು 10 ಎಕರೆ ವಿಸ್ತೀರ್ಣದ ಜಾಗದಲ್ಲಿ ಈ ಸ್ಮಾರಕ ತಲೆಯೆತ್ತಲಿದೆ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಈಗಾಗಲೇ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದೆ. ಅರಣ್ಯ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಈ ಕುರಿತು ಮಾಹಿತಿ ನೀಡಿದ್ದು, ತಿಮ್ಮಕ್ಕನವರ ಪರಿಸರ ಸಂರಕ್ಷಣೆಯ ಕಾರ್ಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಈ ಸ್ಮಾರಕದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಈ ಸ್ಮಾರಕವು ಕೇವಲ ಕಟ್ಟಡವಾಗಿರದೆ, ಪರಿಸರ ಶಿಕ್ಷಣ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಮುಖ ಕೇಂದ್ರವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now