Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ : ಬಿ ರಿಪೋರ್ಟ್ ತಿರಸ್ಕರಿಸಿ, ತನಿಖೆಗೆ ಆದೇಶಿಸಿದ ಕೋರ್ಟ್

---Advertisement---

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗಿದೆ. ಕೊಲೆ ಕೇಸ್ ಸಂಬಂಧ ಮತ್ತೆ ತನಿಖೆ ನಡೆಸಲು ಕೋರ್ಟ್ ಆದೇಶಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿನಯ್ ಕುಲಕರ್ಣಿ ಪರ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಬಿ ರಿಪೋರ್ಟ್ ಅನ್ನು ತಿರಸ್ಕಾರ ಮಾಡಿದ್ದು, ಮತ್ತೆ ತನಿಖೆ ನಡೆಸಲು ಸೂಚಿಸಿದೆ. ದೂರುದಾರ ಗುರುನಾಥ ಗೌಡ ಸಾಕ್ಷ್ಯವಾಗಿ ಸಿಡಿಯನ್ನು ನೀಡಿದ್ದರು ಪೊಲೀಸರು ಅದನ್ನು ಪರಿಗಣಿಸಿಲ್ಲ. ಈ ಸಂಬಂಧ ಅಸಮರ್ಪಕ ತನಿಖೆ ನಡೆಸಿದ ಧಾರವಾಡದ ಸಬ್ ಅರ್ಬನ್ ಠಾಣೆ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಮರು ತನಿಖೆಗೆ ಆಗ್ರಹಿಸಿದೆ.

ಡಿಜಿಟಲ್ ಸಾಕ್ಷ್ಯ ಪರಿಗಣಿಸದೇ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ, ಆರೋಪಿಗಳನ್ನು ತನಿಖೆಗೆ ಒಳಪಡಿಸದೇ ಬೇಜವಾಬ್ದಾರಿ ತೋರಿದ್ದಾರೆ. ತನಿಖೆಗೆ ಸರ್ಕಾರದ ಪೂರ್ವಾನುಮತಿ ಬೇಕೆಂದು ತಪ್ಪು ಮಾಹಿತಿ ನೀಡಲಾಗಿದೆ. ತನಿಖಾಧಿಕಾರಿ ಕಾನೂನು ಅರಿಯಲು ವಿಫಲರಾಗಿದ್ದಾರೆ. ಹೀಗಾಗಿ ಪ್ರಕರಣದ ಮರುತನಿಖೆ ನಡೆಸುವಂತೆ ನ್ಯಾಯಾಧೀಶೆ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ. ಇನ್ನು ಕೊಲೆ ಪ್ರಕರಣ ಸಂಬಂಧ ಸಾಕ್ಷಿ ನಾಶಗೊಳಿಸುವ ಸಾಧ್ಯತೆ ಹಿನ್ನೆಲೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಹಲವು ಬಾರಿ ಪ್ರವೇಶ ಕೋರಿ ಕೋರ್ಟ್​ಗೆ ಮನವಿ ಸಲ್ಲಿಸಿದ್ದ ಕುಲಕರ್ಣಿಗೆ ಅನುಮತಿ ಸಿಕ್ಕಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...