ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗಿದೆ. ಕೊಲೆ ಕೇಸ್ ಸಂಬಂಧ ಮತ್ತೆ ತನಿಖೆ ನಡೆಸಲು ಕೋರ್ಟ್ ಆದೇಶಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿನಯ್ ಕುಲಕರ್ಣಿ ಪರ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಬಿ ರಿಪೋರ್ಟ್ ಅನ್ನು ತಿರಸ್ಕಾರ ಮಾಡಿದ್ದು, ಮತ್ತೆ ತನಿಖೆ ನಡೆಸಲು ಸೂಚಿಸಿದೆ. ದೂರುದಾರ ಗುರುನಾಥ ಗೌಡ ಸಾಕ್ಷ್ಯವಾಗಿ ಸಿಡಿಯನ್ನು ನೀಡಿದ್ದರು ಪೊಲೀಸರು ಅದನ್ನು ಪರಿಗಣಿಸಿಲ್ಲ. ಈ ಸಂಬಂಧ ಅಸಮರ್ಪಕ ತನಿಖೆ ನಡೆಸಿದ ಧಾರವಾಡದ ಸಬ್ ಅರ್ಬನ್ ಠಾಣೆ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಮರು ತನಿಖೆಗೆ ಆಗ್ರಹಿಸಿದೆ.
ಡಿಜಿಟಲ್ ಸಾಕ್ಷ್ಯ ಪರಿಗಣಿಸದೇ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ, ಆರೋಪಿಗಳನ್ನು ತನಿಖೆಗೆ ಒಳಪಡಿಸದೇ ಬೇಜವಾಬ್ದಾರಿ ತೋರಿದ್ದಾರೆ. ತನಿಖೆಗೆ ಸರ್ಕಾರದ ಪೂರ್ವಾನುಮತಿ ಬೇಕೆಂದು ತಪ್ಪು ಮಾಹಿತಿ ನೀಡಲಾಗಿದೆ. ತನಿಖಾಧಿಕಾರಿ ಕಾನೂನು ಅರಿಯಲು ವಿಫಲರಾಗಿದ್ದಾರೆ. ಹೀಗಾಗಿ ಪ್ರಕರಣದ ಮರುತನಿಖೆ ನಡೆಸುವಂತೆ ನ್ಯಾಯಾಧೀಶೆ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ. ಇನ್ನು ಕೊಲೆ ಪ್ರಕರಣ ಸಂಬಂಧ ಸಾಕ್ಷಿ ನಾಶಗೊಳಿಸುವ ಸಾಧ್ಯತೆ ಹಿನ್ನೆಲೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಹಲವು ಬಾರಿ ಪ್ರವೇಶ ಕೋರಿ ಕೋರ್ಟ್ಗೆ ಮನವಿ ಸಲ್ಲಿಸಿದ್ದ ಕುಲಕರ್ಣಿಗೆ ಅನುಮತಿ ಸಿಕ್ಕಿಲ್ಲ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…