ಚಿತ್ರದುರ್ಗ, ( ಮಾ.11) : 2025 ರ ವೇಳೆಗೆ ಕ್ಷಯರೋಗ ಮುಕ್ತ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದು ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಸುಧಾ ಹೇಳಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಆಯೋಜಿಸಿದ್ದ
ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಶುಶ್ರೂಷನಾಧಿಕಾರಿಗಳಿಗೆ ಕ್ಷಯರೋಗ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾನ್ಯ ಪ್ರಧಾನ ಮಂತ್ರಿಗಳು ನೇರವಾಗಿ ಕ್ಷಯ ರೋಗ ಕುರಿತು ಪ್ರಗತಿ ಪರಿಶೀಲನೆ ಮಾಡುತ್ತಿರುವ ಸಲುವಾಗಿ ಇದರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪ್ರಕರಣಗಳನ್ನು ಪತ್ತೆ ಹಚ್ಚಿ ಶೀಘ್ರ ಚಿಕಿತ್ಸೆ ಕೊಡಬೇಕು.ಆಸ್ಪತ್ರೆಗೆ ಬರುವ ಅಸ್ವಸ್ಥ ಕಾಯಿಲೆಗಳಲ್ಲಿ ಕ್ಷಯರೋಗ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಲು ಪರೀಕ್ಷೆಗೆ ಕಡ್ಡಾಯವಾಗಿ ಕಳಿಸಬೇಕು ಎಂದು ಸಲಹೆ ನೀಡಿದರು.
ನಂತರ ಮಾತನಾಡಿದ ನಿವಾಸಿ ವೈದ್ಯಾಧಿಕಾರಿ ಡಾ. ಆನಂದ್ ಪ್ರಕಾಶ್, ಕ್ಷಯ ಮುಕ್ತ ಭಾರತ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಆಸ್ಪತ್ರೆ ವತಿಯಿಂದ ಕ್ಷಯ ರೋಗ ಮಾರ್ಗ ಸೂಚಿಯನ್ವಯ ಎಲ್ಲಾ ರೀತಿಯಲ್ಲಿ ಸಹಕರಿಸಲಾಗುವುದು ಎಂದು ತಿಳಿಸಿದರು.
ಡಾ. ಶಶಿಕುಮಾರ್ ವೈದ್ಯಾಧಿಕಾರಿಯವರು ಕ್ಷಯ ರೋಗದ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಶಾಂತಮ್ಮ, ಮಾರುತಿ ಪ್ರಸಾದ್ , ಲೋಕೇಶ್, ನಾಗರಾಜ್, ಸಂತೋಷ್, ಮಾರುತಿ, ಮಹೇಂದ್ರ, ಯತೀಶ್ ಹಾಗೂ ಜಿಲ್ಲಾ ಆಸ್ಪತ್ರೆಯ ಶುಶ್ರೂಷಣಾಧಿಕಾರಿಗಳು ಹಾಜರಿದ್ದರು.