Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಭಜರಂಗದಳದಿಂದ ತುಮಕೂರು ಬಂದ್.. ಕಾರಣ ಇಲ್ಲಿದೆ..!

Facebook
Twitter
Telegram
WhatsApp

ತುಮಕೂರು: ನಾಳೆ ಇಡೀ ತುಮಕೂರನ್ನ ಬಂದ್ ಮಾಡುವಂತೆ ಭಜರಂಗದಳ ಕರೆ ನೀಡಿದೆ. ವಿವಿಧ ಹಿಂದೂ ಪರ ಸಂಘಟನೆಗಳಿಂದ ತುಮಕೂರು ಬಂದ್ ಗೆ ಕರೆ ನೀಡಲಾಗಿದೆ.

ಭಜರಂಗದಳ ಜಿಲ್ಲಾ ಸಂಚಾಲಕ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆದದ್ದನ್ನ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆ ತುಮಕೂರು ತಾಲೂಕು ಸಂಪೂರ್ಣ ಬಂದ್ ಆಗಲಿದೆ. ವಿವಿಧ ಸಮುದಾಯದ ಮುಖಂಡರು, ವರ್ತಕರು ಬಂದ್ ಗೆ ಬೆಂಬಲ ನೀಡಿದ್ದಾರೆ.

ಭಜರಂಗದಳ ಕಾರ್ಯಕರ್ತರ ಮೇಲೆ ನಗರದ ಗುಬ್ಬಿ ಗೇಟ್ ಬಳಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಭಜರಂಗದಳ ಸಂಚಾಲಕ ಮಂಜು ಭಾರ್ಗವ ಹಾಗೂ ಕಿರಣ್ ಎಂಬುವವರ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ. ಸದ್ಯ ಗಾಯಾಳುಗಳನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಖಂಡಿಸಿ, ನಾಳೆ ತುಮಕೂರು ಬಂದ್ ಮಾಡಲು ಭಜರಂಗದಳ ನಿರ್ಧರಿಸಿದೆ.

ಈ ಸಂಬಂಧ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಗರ ಶಾಸಕ ಜ್ಯೋತಿಗಣೇಶ್, ವಿಶ್ವದಲ್ಲಿ ಹಿಂದೂಗಳಿಗೆ ಮುಕ್ತವಾಗಿರುವ ದೇಶ ಅಂದರೆ ಅದು ಭಾರತ ಮಾತ್ರ. ಇಲ್ಲೂ ಈ ರೀತಿ ದೌರ್ಜನ್ಯಗಳು ನಡೆದರೆ ಹಿಂದೂಗಳನ್ನು ಅರಬ್ಬೀ ಸಮುದ್ರಕ್ಕೆ ಎಸೆಯಬೇಕಾಗುತ್ತದೆ. ಹಾಗಾಗಿ ಹಿಂದೂ ಸಮಾಜ ಒಗ್ಗಟ್ಟಾಗಿ ನಮ್ಮ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!