Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತುಮಕೂರು | ಅಂಗವಿಕಲರಿಗೆ ಸಾಧನ–ಸಲಕರಣೆ ವಿತರಣೆ

---Advertisement---

 

ತುಮಕೂರು, ಜನವರಿ, 03 : ತುಮಕೂರು ಜಿಲ್ಲೆಯ ಬಾಲ ಭವನ, ತುಮಕೂರಿನಲ್ಲಿ ಅಂಗವಿಕಲರ ಸ್ವಾವಲಂಬನೆ ಹಾಗೂ ದೈನಂದಿನ ಚಟುವಟಿಕೆಗಳನ್ನು ಸುಗಮಗೊಳಿಸುವ ಉದ್ದೇಶದಿಂದ ಸಾಧನ–ಸಲಕರಣೆ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಸಂದರ್ಭ ಮಾತನಾಡಿದ ಗಣ್ಯರು, ಇಂತಹ ಸಹಾಯಕ ಸಾಧನಗಳ ವಿತರಣೆಯಿಂದ ಅಂಗವಿಕಲರು ಆತ್ಮವಿಶ್ವಾಸದಿಂದ ಬದುಕಿ ಸ್ವಾವಲಂಬಿಗಳಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಹಿಳಾ ಕಲ್ಯಾಣಾಧಿಕಾರಿ ದಿನೇಶ್, ಅಂಗವಿಕಲ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಚಿದಾನಂದ, ಅಭಿವೃದ್ದಿ ಸೊಸೈಟಿ ಫಾರ್ ಸೋಷಿಯಲ್ ಡೆವಲಪ್‌ಮೆಂಟ್, ತುಮಕೂರು ಸಂಸ್ಥೆಯ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ಏಬಲ್ ಇಂಡಿಯಾ ಸಂಸ್ಥೆಯ ಪ್ರತಿನಿಧಿ ಸಿದ್ದಾರ್ಥ್ ಅವರೊಂದಿಗೆ ಡಾ. ನಿಸರ್ಗ, ದಿವ್ಯ ಶ್ರೀ ಹಾಗೂ ನಮ್ರತಾ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಬೆಂಬಲ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಂಗವಿಕಲರಿಗೆ ವೀಲ್ಚೇರ್, ವಾಕರ್ ಸೇರಿದಂತೆ ಅವರ ಅಗತ್ಯಕ್ಕೆ ಅನುಗುಣವಾದ ವಿವಿಧ ಸಾಧನ–ಸಲಕರಣೆಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಸೈಯದ್ ಹೈದರ್ ಅವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಒಟ್ಟು 22 ಮಂದಿ ಅಂಗವಿಕಲರು ಭಾಗವಹಿಸಿ ಸಾಧನ–ಸಲಕರಣೆಗಳನ್ನು ಪಡೆದು ಸಂತಸ ವ್ಯಕ್ತಪಡಿಸಿದರು. ಸ್ಥಳೀಯ ನಾಗರಿಕರು ಹಾಗೂ ಸಂಘಟನೆಯ ಸದಸ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕಾರ್ಯಕ್ರಮವು ಶಾಂತವಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now