Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾತ್ರಾಳು ಕೆರೆಗೆ ಹರಿದ ತುಂಗಾ ನದಿ ನೀರು : ಶೀಘ್ರದಲ್ಲೇ ತರಳಬಾಳು ಶ್ರೀಗಳಿಗೆ ಗೌರವ ಸಮರ್ಪಣೆ ಮತ್ತು ಗಾಜನೂರು ಜಲಾಶಯಕ್ಕೆ ಬಾಗಿನ ಸಮರ್ಪಣೆ

---Advertisement---

ಚಿತ್ರದುರ್ಗ, (ಜು.15) : ತುಂಗಾ ಜಲಾಶಯ  ಭರ್ತಿಯಾಗಿ ನೀರು ನದಿಗೆ ಹೋಗುತ್ತಿರುವ ಹಿನ್ನಲೆ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ವತಿಯಂದ ಜುಲೈ ಅಂತ್ಯಕ್ಕೆ ಬಯಲು ಸೀಮೆ ಬಾಗಿನ ಸಮರ್ಪಣೆ ಮಾಡಲು ನಿರ್ಧರಿಸಲಾಗಿದೆ.

ಕಾತ್ರಾಳು ಕೆರೆಗೆ ತುಂಗಾ ನದಿ ನೀರು ಪೂರೈಕೆಯಾದ ಹಿನ್ನಲೆ ಹೋರಾಟ ಸಮಿತಿ ವತಿಯಿಂದ ಶನಿವಾರ ಕೆರೆಯಂಗಳದಲ್ಲಿ ಹಮ್ಮಿಕೊಳ್ಳಲಾದ ತರಳಬಾಳು ಶ್ರೀಗಳಿಗೆ ಧನ್ಯತೆ ಅರ್ಪಿಸುವ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಸುರೇಶ್‌ಬಾಬು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ತುಂಗಾ ನದಿಯಿಂದಲೇ ಹೆಚ್ಚು ನೀರಿನ ಪಾಲು ಇದೆ.

ಹಾಗಾಗಿ ಜಲಾಶಯ ಭರ್ತಿಯಾಗಿರುವುದರಿಂದ ಈ ಬಾರಿ ಗಾಜನೂರು ಜಲಾಶಯಕ್ಕೆ ತೆರಳಿ ಬಾಗಿನ ಸಮರ್ಪಣೆ ಮಾಡಲಾಗುವುದು. ಕನಿಷ್ಟ ಒಂದು ಸಾವಿರ ಜನರು ತೆರಳುವ ನಿರೀಕ್ಷೆಯಿದೆ ಎಂದರು.

ತರಳಬಾಳು ಶ್ರೀಗಳ ದೂರದೃಷ್ಠಿಯಿಂದಾಗಿ ಜಿಲ್ಲೆಯ 42 ಕೆರೆಗಳಿಗೆ ತುಂಗ ಭದ್ರೆ ನದಿಯಿಂದ ಏತ ನೀರಾವರಿ ಮೂಲಕ ನೀರು ಹರಿಸಲಾಗುತ್ತಿದೆ. ಹೋರಾಟ ಸಮಿತಿ ಶ್ರೀಗಳಿಗೆ ಧನ್ಯತೆ ವ್ಯಕ್ತಪಡಿಸುತ್ತಿದೆ. ಎಲ್ಲ ಕೆರೆಗಳ ಅಚ್ಚಕಟ್ಟುದಾರರ ಸಭೆ ನಡೆಸಿ ತರಳಬಾಳು ಶ್ರೀಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಶೀಘ್ರ ಶ್ರೀಗಳ ಸಂಪರ್ಕಿಸಿ ಅಪ್ಪಣೆ ಪಡೆಯಲಾಗುವುದೆಂದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ್ ಮಾತನಾಡಿ ಜಿಲ್ಲೆಯ ಕೆರೆಗಳಿಗೆ ತುಂಗ ಭದ್ರೆಯಿಂದ ನೀರು ಹರಿದು ಬರಲು ಶುರುವಾಗಿದೆ. ಕಳೆದ ಐದು ವರ್ಷಗಳಿಂದ ಕೆರೆಗಳಲ್ಲಿ ಗಿಡ ಮರಗಳ ತೆಗೆಸಿ ಏರಿ ಭದ್ರ ಮಾಡುವಂತೆ ಹಲವಾರು ಬಾರಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಗಮಕ್ಕೆ ತರಲಾಗಿದ್ದರೂ ಉದಾಸೀನ ತೋರಲಾಗಿದೆ.  ಇನ್ನು ಮೇಲಾದರೂ ಕೆರೆಗಳ ಏರಿ ಭದ್ರ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಲಿ ಎಂದರು.

ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ ಮಾತನಾಡಿ ಈ ಮೊದಲು `ಭದ್ರಾ ಮೇಲ್ದಂಡೆ ಯೋಜನೆಯಡಿ ಕಾತ್ರಾಳು, ಮುದ್ದಾಪುರ, ಸುಲ್ತಾನಿಪುರ ಕೆರೆಗಳಿಗೆ ನೀರು ತುಂಬಿಸುವ ಅವಕಾಶ ಕಲ್ಪಿಸಲಾಗಿತ್ತು. ಇದಕ್ಕೂ ಮೊದಲು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳ ಇಚ್ಚಾಶಕ್ತಿ ಬಲವಾಗಿ ಕಾತ್ರಾಳು ಕೆರೆಗೆ ನೀರು ಹರಿದಿದೆ. ಇದಕ್ಕಾಗಿ ಸಮಿತಿಯು ಅವರಿಗೆ ಧನ್ಯತೆ ಅರ್ಪಿಸುತ್ತಿದೆ ಎಂದರು.

ಹರಿಹರದ ರಾಜನಹಳ್ಳಿ ಸಮೀಪದ ತುಂಗಾ ಭದ್ರಾ ನದಿಯಿಂದ 565 ಕೋಟಿ ರುಪಾಯಿ ವೆಚ್ಚದಲ್ಲಿ 42 ಕೆರೆಗಳಿಗೆ ತೀರು ತುಂಬಿಸಲಾಗುತ್ತಿದೆ. ಕಾತ್ರಾಳು ಕೆರೆಗೆ ನೀರು ಬಂದಿದ್ದು ಮುದ್ದಾಪುರ ಹಾಗೂ ಸುಲ್ತಾನಿಪುರ ಕೆರೆಗಳಿಗೆ ನೀರು ಪೂರೈಕೆ ಕಾಮಗಾರಿ ನಡೆಯುತ್ತಿದೆ. ಅದು ಶೀಘ್ರ ಪೂರ್ಣಗೊಂಡಲ್ಲಿ ಮುಂದಿನ ವರ್ಷ ಈ ಕೆರೆಗಳಿಗೂ ತುಂಗಭದ್ರಾ ನೀರು ಪೂರೈಕೆಯಾಗಲಿದೆ. ರೈತರು ತಮ್ಮ ವ್ಯಾಪ್ತಿಯ ಕೆರೆಗಳ  ಏರಿ ಭದ್ರ ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳ ಮೇಲೆ ಒತ್ತಡ ಹಾಕಬೇಕೆಂದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮುದ್ದಾಪುರ ನಾಗರಾಜ್,ರೈತ ಸಂಘದ ಮುಖಂಡ ಕಬ್ಬಿಗೆರೆ ನಾಗರಾಜ್, ಕಮ್ಯನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್‌ಬಾಬು, ರಾಜಪ್ಪ, ಮುದ್ದಾಪುರ ಮಂಜುನಾಥ್, ಹಿರೇಕಬ್ಬಿಗೆರೆ ರಾಜಪ್ಪ, ಜಯಣ್ಣ, ರಾಯಣ್ಣನಹಳ್ಳಿ ಅನಿಲ್ ಕುಮಾರ್,  ಪ್ರದೀಪ್ ರಾಜ್, ಸಿದ್ದವ್ವನದುರ್ಗ ಶಿವಕುಮಾರ್, ಪರಮೇಶ್ವರಪ್ಪ,  ಶಿವಣ್ಣ ಮೇಸ್ಟ್ರು, ವಿಜಾಪುರದ ಎಸ್‌ಎಂ ತಿಪ್ಪೇಸ್ವಾಮಿ,ನಾಗರಾಜಪ್ಪ, ರೇವಣಸಿದ್ದಪ್ಪ ಧನ್ಯತೆ ಅರ್ಪಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾತ್ರಾಳು ಕೆರೆಗೆ ತುಂಗೆ ಹರಿದು ಬಂದ ಹಿನ್ನಲೆ ಸಿಹಿ ಹಂಚಿ, ಸಂಭ್ರಮಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment