ವಿಧಾನಸೌಧ ಕಟ್ಟಡಕ್ಕೆ ಅರಿಶಿನ – ಕುಂಕುಮ ನಿಷೇಧ : ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ಆಕ್ರೋಶ

1 Min Read

 

ಬೆಂಗಳೂರು: ಆಯುಧ ಪೂಜೆ ಹತ್ತಿರವಾಗುತ್ತಿದೆ. ಆಯುಧ ಪೂಜೆ ಸಂದರ್ಭದಲ್ಲಿ ಅರಿಶಿನ, ಕುಂಕುಮವಿಟ್ಟು ಪೂಜೆ ಮಾಡಿ, ಕುಂಬಳಕಾಯಿ ಒಡೆಯುತ್ತಾರೆ. ಆದರೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಕುಂಕುಮ ಮತ್ತು ಅರಿಶಿನ ಬಳಕೆ ನಿಷೇಧ ಮಾಡಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗರಂ ಆಗಿದ್ದು, ಇಂಎಇಯಾ ಮೈತ್ರಿ ಪಕ್ಷಗಳ ನಡುವೆ ನೂರು ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಅವರು ಈ ನೆಲದ ಸ್ಥಳೀಯ ಸಂಸ್ಕೃತಿಯ ದ್ವೇಷ ಮತ್ತು ತಿರಸ್ಕಾರಗಳಲ್ಲಿ ಒಂದಾಗಿದ್ದಾರೆ. ವರ್ಷಗಳಿಂದ ದಕ್ಷಿಣ ಭಾರತದ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಉದ್ಯೋಗಿಗಳು ಆಯುಧ ಪೂಜೆಯನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ಮಹತ್ವ್ ಸಾಂಸ್ಕೃತಿಕ ಆಚರಣೆಗೆ ಇದೀಗ ಮೈತ್ರಿಕೂಟ ತಡೆಯುವ ಗುರಿಯನ್ನು ಹಾಕಿಕೊಂಡಿದೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *