Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ ಗಲಾಟೆಯಲ್ಲಿ ಟ್ವಿಸ್ಟ್ : ಅಲ್ಲಿದ್ದವರು ಆಂಧ್ರ, ತೆಲಂಗಾಣದಿಂದ ಬಂದವರಾ..?

---Advertisement---

ಬಳ್ಳಾರಿ: ಬ್ಯಾನರ್ ಗಲಾಟೆ ಕೇಸ್ ಗೆ ಸಂಬಂಧಿಸಿದಂತೆ ದಿನೇ‌ದಿನೇ ಬಿಗ್ ಅಪ್ಡೇಟ್ ಆಗ್ತಾ ಇದೆ. ಹೊಸದಾಗಿ ಬಂದಿರುವ ಎಸ್ಪಿ ಸುಮನ್ ಡಿ ಪನ್ನೇಕರ್ ಪ್ರಕರಣವನ್ನು ಗಂಭೀರವಾಗಿ‌ ಪರಿಗಣಿಸಿದ್ದು, ಎಲ್ಲಾ ಆಯಾಮದಿಂದಾನೂ ತನಿಖೆಯನ್ನ ನಡೆಸುತ್ತಿದ್ದಾರೆ. ಸದ್ಯ ಸಿಸಿಟಿವಿ ನೋಡಿದಾಗ ಆ ಘಟನೆಯ ಬಗ್ಗೆ ಶಾಕಿಂಗ್ ವಿಚಾರವೊಂದು ಜೊರ ಬಂದಿದೆ.

ಅಂದು ಬ್ಯಾನರ್ ಕಟ್ಟುವುದಕ್ಕೆ ಹೋದಾಗ ಘಟನೆ ನಡೆದಿರುವುದು. ಆದರೆ ಆ ಗುಂಪಲ್ಲಿ ಸ್ಥಳೀಯ ಅಂದ್ರೆ ಬಳ್ಳಾರಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಇರಲೇ ಇಲ್ಲ ಎಂಬ ಮಾಹಿತಿ ಹೊರ ಬಿದ್ದಿದೆ. ಆಂಧ್ರ ಹಾಗೂ ತೆಲಂಗಾಣ ಭಾಗದಿಂದ ಜನ ಬಂದಿದ್ದಾರೆ ಎಂಬ ಅನುಮಾನ ವಿಡಿಯೋ ಪರಿಶೀಲನೆ ನಡೆಸಿದಾಗ ಅನುಮಾನ ವ್ಯಕ್ತವಾಗಿದೆ. ವಿಡಿಯೋಗಳನ್ನ ತೋರಿಸಿ ಸ್ಥಳೀಯರ ಬಳಿ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ವಿಡಿಯೋದಲ್ಲಿ ಇರೋರು ಯಾರಂತ ಗೊತ್ತಿಲ್ಲ ಅಂತ ಸ್ಥಳೀಯರು ಪೊಲೀಸರಿಗೆ ಹೇಳಿದ್ದಾರಂತೆ.

 

ಈ ಹಿನ್ನೆಲೆ ಒಂದು ಸ್ಪೆಷಲ್ ಟೀಂ ಆಂಧ್ರ ಹಾಗೂ ತೆಲಂಗಾಣದಲ್ಲೂ ಕಾರ್ಯಾಚರಣೆಗೆ ಇಳಿದಿದೆ. ಪೊಲೀಸರು 15 ದಿನಗಳ ಟವರ್ ಲೊಕೇಷನ್ ಟ್ರ‍್ಯಾಕ್ ಮಾಡಿದ್ದಾರೆ. ಇದರೊಂದಿಗೆ ಗಲಾಟೆಯಲ್ಲಿ ಬಳಕೆಯಾದ ದೊಣ್ಣೆಗಳ ರಾಶಿ, ಗನ್ ಬಳಕೆ ರೀತಿ, ಕಲ್ಲು, ಖಾರದ ಪುಡಿ ಬಳಕೆ ಎಲ್ಲವೂ ಒಂದೇ ಮಾದರಿಯಲ್ಲಿದ್ದು ಇವೆಲ್ಲವನ್ನೂ ದಿಢೀರ್ ಅಂತ ಸಂಗ್ರಹ ಮಾಡಿದ್ರಾ? ಅಥವಾ ಉದ್ದೇಶ ಪೂರ್ವಕವಾಗಿ ಮಾಡಿದ್ದಾರಾ ಎಂಬುದರ ಟೆಕ್ನಿಕಲ್ ಅನಾಲಿಸಿಸ್‌ಗೆ ಅಂತಲೇ ಮೂರು ವಿಶೇಷ ತಂಡ ರಚನೆ ಮಾಡಲಾಗಿದೆ. ಗಲಭೆಯ ವಿಚಾರಣೆಯನ್ನ ಗಂಭೀರವಾಗಿ ಪರಿಗಣಿಸಿರುವ ಎಸ್ಪಿ ತನಿಖೆಯನ್ನು ಮುಂದುವರೆಸಿದ್ದಾರೆ. ಇದರ ನಡುವೆ ಜನಾರ್ದನ ರೆಡ್ಡಿ ಅವರು, ಭರತ್ ರೆಡ್ಡಿ ಬಂಧನಕ್ಕೆ ಆಗ್ರಹಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now