ಚಿತ್ರದುರ್ಗ. ಮಾ.10: ಚಿತ್ರದುರ್ಗ ತಾಲ್ಲೂಕು ಭರಮಸಾಗರ ಶಿಶುಅಭಿವೃದ್ಧಿ ಯೋಜನೆಯ ಹುಣಸೇಕಟ್ಟೆ-ಬಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಎಂ.ಬಿ.ಭಾರತಮ್ಮ ಅವರು ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹೊಸದುರ್ಗ ತಾಲ್ಲೂಕು ಜಾನಕಲ್ ಶ್ರೀ ಪಾರ್ವತಿ ಸ್ತ್ರೀ ಶಕ್ತಿ ಗುಂಪು ಅತ್ಯುತ್ತಮ ಸ್ತ್ರೀಶಕ್ತಿ ಗುಂಪು ಪ್ರಶಸ್ತಿಗೆ ಆಯ್ಕೆಯಾಗಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಭರಮಸಾಗರ ಶಿಶುಅಭಿವೃದ್ಧಿ ಯೋಜನೆಯ ಹುಣಸೇಕಟ್ಟೆ-ಬಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಎಂ.ಬಿ.ಭಾರತಮ್ಮ ಅವರಿಗೆ ಹಾಗೂ ಹೊಸದುರ್ಗ ತಾಲ್ಲೂಕು ಜಾನಕಲ್ ಶ್ರೀ ಪಾರ್ವತಿ ಸ್ತ್ರೀ ಶಕ್ತಿ ಗುಂಪಿನ ಸಂಘದ ಪ್ರತಿನಿಧಿ ಜಿ.ಎಸ್.ನೀಲಮ್ಮ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಹುಬ್ಬಳ್ಳಿ; ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಲ್ಲಿಯೇ ಇದ್ರು ಕೂಡ ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ…
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 15 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 15 ) ಹತ್ತಿ ಮಾರುಕಟ್ಟೆ…
ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ…
ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ…
ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…
ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…