Connect with us

Hi, what are you looking for?

ಪ್ರಮುಖ ಸುದ್ದಿ

ಎರಡು ದಿನ ಹುಬ್ಬಳ್ಳಿ ಸಂಪೂರ್ಣ ಲಾಕ್; ಜಿಲ್ಲಾಧಿಕಾರಿ ನಿತೇಶ್ ಪಾಟೀಲ್

ಸುದ್ದಿಒನ್, ಹುಬ್ಬಳ್ಳಿ, (ಮೇ.21) : ಕೋವಿಡ್ ಸರಪಳಿ ತುಂಡರಿಸಲು ಹುಬ್ಬಳ್ಳಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಮೇ 22 ರಿಂದ ಎರಡು ದಿನ ಜಿಲ್ಲಾದ್ಯಂತ ಸಂಪೂರ್ಣ ಲಾಕ್‍ಡೌನ್ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶಿಸಿದ್ದಾರೆ.

22 ರ ಬೆಳಗ್ಗೆ 6ರಿಂದ 24ರ ಬೆಳಗ್ಗೆ 6ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ವೈದ್ಯಕೀಯ ತುರ್ತು ಸೌಲಭ್ಯ ಹೊರತುಪಡಿಸಿ ಉಳಿದ ಎಲ್ಲವನ್ನೂ ಬಂದ್ ಮಾಡಬೇಕು. ಹಣ್ಣು–ತರಕಾರಿ ಮತ್ತು ಹಾಲು ಮಾರಾಟ ಕೇಂದ್ರಗಳಿಗೆ ಬೆಳಗ್ಗೆ 6ರಿಂದ 8 ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಲಾಕ್‍ಡೌನ್ ವಿಸ್ತರಣೆಗೆ ಒತ್ತಾಯ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ಎಪಿಎಂಸಿ ಪ್ರತಿನಿಧಿಗಳು, ಉದ್ದಿಮೆದಾದರು, ವಿವಿಧ ವಾಣಿಜ್ಯ ಸಂಘಟನೆಗಳ ಪ್ರಮುಖರ ಸಭೆ ನಡೆಯಿತು. ಈ ವೇಳೆ ಅನೇಕರು ಲಾಕ್‍ಡೌನ್ ವಿಸ್ತರಣೆ ಸುರಕ್ಷಿತ ಮಾರ್ಗ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪ್ರಲ್ಹಾದ ಜೋಶಿ, ಸಭೆಯಲ್ಲಿ ಬಹುತೇಕರು ಕಠಿಣ ಲಾಕ್‍ಡೌನ್‍ಗೆ ಒಲವು ತೋರಿದ್ದಾರೆ. ಸೋಂಕು ಹರಡುವ ಸರಪಳಿ ಕಳಚಲು ಲಾಕ್‍ಡೌನ್ ಅಗತ್ಯ ಎಂದಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಾಗುತ್ತಿದೆ. ಉದ್ದಿಮೆ ಹಾಗೂ ವ್ಯಾಪಾರದ ಸ್ಥಳಗಳಲ್ಲಿ ಕೋವಿಡ್ ವೇಗವಾಗಿ ಹರಡುತ್ತಿರುವ ಕಾರಣ ಬಹಳಷ್ಟು ಜನ ಆತಂಕಕ್ಕೆ ಒಳಗಾಗಿದ್ದಾರೆ. ಕಪ್ಪು ಶಿಲೀಂಧ್ರ ಬಹಳ ದೊಡ್ಡ ಪ್ರಮಾಣದಲ್ಲಿ ಕಂಡು ಬರುತ್ತಿರುವುದು ಆತಂಕಕಾರಿ. ಇದನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ’ ಎಂದು ಹೇಳಿದರು.

‘ಕಪ್ಪು ಶಿಲೀಂಧ್ರ ರೋಗ ಮೊದಲು ಸಣ್ಣ ಪ್ರಮಾಣದಲ್ಲಿ ಇತ್ತು. ಈಗ ಈ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಔಷಧಗಳ ಕೊರತೆಯಾಗಿದೆ. ಔಷಧ ತಯಾರಿಕಾ ಕಂಪನಿಗಳು ಇಷ್ಟು ಪ್ರಮಾಣದಲ್ಲಿ ರೋಗ ಕಂಡು ಬರುಬಹುದು ಎಂದು ಅಂದಾಜು ಸಹ ಮಾಡಿರಲಿಲ್ಲ. ಅಗತ್ಯ ಔಷಧಗಳನ್ನು ತ್ವರಿತವಾಗಿ ಉತ್ಪಾದಿಸಲು, ಆಮದು ಮಾಡಿಕೊಳ್ಳಲು ಪ್ರಯತ್ನ ಮಾಡಲಾಗುತ್ತಿದೆ. ಹಂತ ಹಂತವಾಗಿ ಔಷಧ ಒದಗಿಸಲಾಗುವುದು’ ಎಂದರು.

ಶಾಸಕರಾದ ಅರವಿಂದ ಬೆಲ್ಲದ, ಪ್ರದೀಪ ಶೆಟ್ಟರ್, ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್, ಜಿಲ್ಲಾ ಪಂಚಾಯ್ತಿ ಸಿಇಒ ಬಿ.ಸುಶೀಲಾ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಉಪವಿಭಾಗಾಧಿಕಾರಿ ಗೋಪಾಲಕೃಷ್ಣ, ಹುಬ್ಬಳ್ಳಿ ತಹಶೀಲ್ದಾರ್ ಶಶಿಧರ ಮಾಡ್ಯಾಳ ಪಾಲ್ಗೊಂಡಿದ್ದರು.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!