Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎರಡು ದಿನಗಳ ಜೇನು ಕೃಷಿಯ ತಾಂತ್ರಿಕ ಕಾರ್ಯಾಗಾರ

---Advertisement---

 

ಚಿತ್ರದುರ್ಗ. ಮೇ23 : ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಮೇ.26 ಮತ್ತು 27ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಜೇನು ಕೃಷಿಯ ಕುರಿತು ಎರಡು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಜೇನು ಕೃಷಿ ತಜ್ಞರು ಹಾಗೂ ನಿವೃತ್ತ  ಸಹಾಯಕ ನಿರ್ದೇಶಕ ಮೇಟಿಕುರ್ಕಿಯ ಡಾ.ಶಾಂತವೀರಯ್ಯ ಅವರು ಜೇನು ಸಾಕಾಣಿಕೆಯ ಸಮಗ್ರ ಮಾಹಿತಿ ಬಗ್ಗೆ ವಿಷಯ ಮಂಡನೆ ಹಾಗೂ ಪ್ರಾತ್ಯಕ್ಷಿಕೆ ನೀಡುವರು.

 

ಆಸಕ್ತ 40 ಜನ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು. ಮೊದಲು ನೋಂದಾವಣೆ ಮಾಡಿಕೊಂಡ 40 ರೈತಭಾಂದವರು ಫ್ರೂಟ್ಸ್ ಐಡಿ (ಎಫ್‍ಐಡಿ) ಅಥವಾ ಆಧಾರ್ ಕಾರ್ಡ್‍ನೊಂದಿಗೆ ತರಬೇತಿಗೆ ಹಾಜರಾಗಬೇಕು ಎಂದು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...