Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಪ್ರತಿಷ್ಠಿತ ‘ಡಿಜಿ-ಐಜಿಪಿ ಪ್ರಶಸ್ತಿ’: ಎಸ್ ಪಿ ರಂಜಿತ್ ಕುಮಾರ್ ಬಂಡಾರು ಅಭಿನಂದನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್‌. 25 : 2025-26 ನೇ ಸಾಲಿನ ಅತ್ಯುನ್ನತ ಮತ್ತು ಗೌರವಾನ್ವಿತ ‘ಮಾನ್ಯ ಡಿಜಿ-ಐಜಿಪಿ ಶ್ಲಾಘನೀಯ ಪದಕ’ಕ್ಕೆ ಚಿತ್ರದುರ್ಗ ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಐಮಂಗಲ ಪಿಟಿಎಸ್ ಪೊಲೀಸ್ ಅಧೀಕ್ಷಕರಾದ ಪಾಪಣ್ಣ ಹಾಗೂ ಭರಮಸಾಗರ ಪೊಲೀಸ್ ಠಾಣೆಯ ಮಹಿಳಾ ಹೆಡ್ ಕಾನ್ಸ್ ಟೇಬಲ್ ಜ್ಯೋತಿ ಎನ್. ಬಿ. ಅವರು ಈ ಬಾರಿಯ ಪ್ರತಿಷ್ಠಿತ ಪದಕವನ್ನು ಮುಡಿಗೇರಿಸಿಕೊಂಡ ಹೆಮ್ಮೆಯ ಅಧಿಕಾರಿಗಳಾಗಿದ್ದಾರೆ.

ಇಲಾಖೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಗುರುತಿಸಿ ಲಭಿಸಿರುವ ಈ ಗೌರವಕ್ಕಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ರಂಜಿತ್ ಕುಮಾರ್ ಬಂಡಾರು ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಪದಕ ವಿಜೇತ ಇಬ್ಬರೂ ಅಧಿಕಾರಿಗಳಿಗೆ ವೈಯಕ್ತಿಕವಾಗಿ ಹಾಗೂ ಇಡೀ ಜಿಲ್ಲಾ ಪೊಲೀಸ್ ತಂಡದ ಪರವಾಗಿ ಎಸ್ ಪಿಯವರು ಹೃತ್ಪೂರ್ವಕವಾಗಿ ಶುಭ ಕೋರಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now