Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ ಪೊಲೀಸರಿಂದ ದ್ವಿಚಕ್ರ ವಾಹನ ಕಳ್ಳನ ಬಂಧನ : 14 ಲಕ್ಷ ಮೌಲ್ಯದ 37 ಬೈಕ್ ವಶ 

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 09 : ಚಳ್ಳಕೆರೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬೈಕ್ ಕಳ್ಳನನ್ನು ಬಂಧಿಸಿ 37 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಹಿರಿಯೂರು ತಾಲೂಕಿನ ಮಹಮ್ಮದ್ ಶರೀಫ್ ಎಂಬಾತನನ್ನು ಬಂಧಿಸಿ ಸುಮಾರು 14 ಲಕ್ಷದ ಮೌಲ್ಯದ 37 ವಿವಿಧ ಕಂಪನಿಯ ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದ ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಂಗಳೂರು, ದಾವಣಗೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಸೇರಿದಂತೆ 28 ವಿವಿಧ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದು ಚಳ್ಳಕೆರೆ ಪೊಲೀಸರ ಕಾರ್ಯಾಚರಣೆಗೆ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಭಂಡಾರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಭಂಡಾರು ಹಾಗೂ ಹೆಚ್ಚುವರಿ ಎಸ್ ಪಿ ಆರ್ ಶಿವಕುಮಾರ್, ಚಳ್ಳಕೆರೆ ಪ್ರಭಾರ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್, ಡಿವೈಎಸ್ಪಿ ಸತ್ಯನಾರಾಯಣರಾವ್ ಮಾರ್ಗದರ್ಶನದಲ್ಲಿ ಪಿಎಸ್ಐ ಗಳಾದ ಈರೇಶ್ ಜಿ ಶಿವರಾಜ್ ದರಪ್ಪ ನೇತೃತ್ವದಲ್ಲಿ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು.

ಕಾರ್ಯಚರಣೆ ವೇಳೆ ಪೊಲೀಸ್ ಸಿಬ್ಬಂದಿಗಳಾದ ಎ ಎಸ್ ಐ ರಾಘವ ರೆಡ್ಡಿ ಪೇದೆಗಳಾದ ವಸಂತ್ ಕುಮಾರ್ ವೆಂಕಟೇಶ್ ಶ್ರೀನಿವಾಸ ಶಿವಕುಮಾರ್ ಮಂಜುನಾಥ ಪರಶುರಾಮ ಶ್ರೀಧರ ರಮೇಶ್ ಬಾರ್ಕಿ ಅಶೋಕ್ ರೆಡ್ಡಿ ಮಂಜುನಾಥ್ ತಿರುಕಪ್ಪ ತಳವಾರ್ ಬಸವರಾಜ್ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...