Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎರಡು ವರ್ಷ: ಜೈಲಿನೊಳಗಿನ ದರ್ಶನ್–ಪವಿತ್ರಾ ಗೌಡ ದಿನಚರಿ  ಹೀಗಿದೆ

---Advertisement---

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳ ಬಂಧನಕ್ಕೆ ಇಂದಿಗೆ ಎರಡು ವರ್ಷಗಳು ಪೂರ್ಣಗೊಂಡಿವೆ. 2024ರ ಜೂನ್ 11ರಂದು ಮೈಸೂರಿನ ಹೋಟೆಲ್ ಒಂದರಲ್ಲಿ ಬಂಧಿತರಾಗಿದ್ದ ದರ್ಶನ್, ಮಧ್ಯಂತರ ಜಾಮೀನಿನ ಬಳಿಕ ಮತ್ತೆ ಜೈಲು ಸೇರಿದ್ದರು. ಬಳಿಕ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರ ಜೈಲು ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬಂದಿವೆ.

ಸುಪ್ರೀಂಕೋರ್ಟ್ ಆದೇಶದ ನಂತರ ಕನಿಷ್ಠ ಇನ್ನೂ ಒಂದು ವರ್ಷದವರೆಗೆ ಜಾಮೀನು ದೊರೆಯುವ ಸಾಧ್ಯತೆ ಕ್ಷೀಣವಾಗಿದೆ ಎಂಬ ವಾಸ್ತವವನ್ನು ಅರಿತಿರುವ ದರ್ಶನ್, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೌನ ಜೀವನ ನಡೆಸುತ್ತಿದ್ದಾರೆ ಎನ್ನಲಾಗಿದೆ. ಜೈಲಿನೊಳಗೆ ಇತರ ಕೈದಿಗಳೊಂದಿಗೆ ಹೆಚ್ಚು ಬೆರೆಯದೆ, ವಾರಕ್ಕೊಮ್ಮೆ ಜೈಲಾಡಳಿತ ನೀಡುವ ಪುಸ್ತಕಗಳನ್ನು ಓದುತ್ತಾ ಸಮಯ ಕಳೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಜೈಲಿನಲ್ಲೇ ತಮ್ಮ ಆತ್ಮಚರಿತ್ರೆ ಬರೆಯಲು ಮುಂದಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಪ್ರತಿದಿನ ಜೈಲಾಧಿಕಾರಿಗಳಿಂದ ಬಿಳಿ ಹಾಳೆ ಹಾಗೂ ಪೆನ್ಸಿಲ್ ಪಡೆದು ತಮ್ಮ ಜೀವನದ ಅನುಭವಗಳು, ವೈಯಕ್ತಿಕ ಘಟನೆಗಳು ಮತ್ತು ಬದುಕಿನ ಪಯಣವನ್ನು ದಾಖಲಿಸುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಜೈಲಿನಲ್ಲಿ ನಡೆದ ಯೋಗಾಭ್ಯಾಸ ಕಾರ್ಯಕ್ರಮಗಳಲ್ಲೂ ಭಾಗವಹಿಸದೆ, ಬರವಣಿಗೆಯಲ್ಲೇ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದೇ ವೇಳೆ ಪ್ರಕರಣದ ಐವರು ಆರೋಪಿಗಳಿಗೆ ಮಹತ್ವದ ಕಾನೂನು ರಿಲೀಫ್ ದೊರೆತಿದೆ. ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವಿನಯ್, ನಂದೀಶ್, ಧನರಾಜು, ಪವನ್ ಹಾಗೂ ರಾಘವೇಂದ್ರ ಅವರ ಜಾಮೀನನ್ನು ರದ್ದುಪಡಿಸುವಂತೆ ಪ್ರಾಸಿಕ್ಯೂಷನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.ಪ್ರಕರಣದ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ಐವರು ಆರೋಪಿಗಳ ಜಾಮೀನನ್ನು ಮುಂದುವರಿಸಲು ಅನುಮತಿ ನೀಡಿದೆ. ಇದರೊಂದಿಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆ ಮತ್ತೊಂದು ಮಹತ್ವದ ಹಂತ ತಲುಪಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now