Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶಕ್ತಿ ಯೋಜನೆಗೆ ಎರಡು ವರ್ಷ : ಜುಲೈ 14 ರಂದು ಸಂಭ್ರಮಾಚರಣೆ

---Advertisement---

 

ಚಿತ್ರದುರ್ಗ ಜು. 10 : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿರುವ “ಶಕ್ತಿ” ಯೋಜನೆಯನ್ನು ಜಾರಿಗೊಳಿಸಿ 2 ವರ್ಷಗಳು ಪೂರ್ಣಗೊಂಡಿದ್ದು, 500 ಕೋಟಿಗೂ ಹೆಚ್ಚು ಮಹಿಳೆಯರು ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಜು. 14 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕುಗಳಲ್ಲಿನ ಬಸ್ ಡಿಪೋ, ಬಸ್ ನಿಲ್ದಾಣಗಳಲ್ಲಿ ಸಂಭ್ರಮವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಆರ್. ಶಿವಣ್ಣ ತಿಳಿಸಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳ ಪೈಕಿ “ಶಕ್ತಿ” ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಕಳೆದ 2023 ರ ಜೂನ್ 11 ರಿಂದ ಜಾರಿಗೊಳಿಸಿದ್ದು, ರಾಜ್ಯದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.  ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ ಫಲಾನುಭವಿಗಳ ಸಂಖ್ಯೆ 500 ಕೊಟಿ ಗಡಿ ದಾಟಿದ್ದು, ಇದು ಸಂಭ್ರಮದ ಸಂಗತಿಯಾಗಿದೆ.  ಈ ಸಂಭ್ರಮವನ್ನು ಸಾಂಕೇತಿಕವಾಗಿ ಜು. 14 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿನ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ, ಬಸ್ಸಿಗೆ ಪೂಜೆ ಸಲ್ಲಿಸಿ, ಸಾರಿಗೆ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ಸಿಹಿ ತಿನಿಸಿ ಆಚರಿಸಲಾಗುವುದು.  ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಸೇರಿದಂತೆ ಎಲ್ಲ ಗಣ್ಯಮಾನ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರುಗಳು, ಸದಸ್ಯರುಗಳು, ಉನ್ನತ ಅಧಿಕಾರಿಗಳು, ಸಾರಿಗೆ ಸಂಸ್ಥೆಯ ಅಧಿಕಾರಿ, ಸಿಬ್ಬಂದಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಆರ್. ಶಿವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...