Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಜಲಸಮಾಧಿ

---Advertisement---

ಸುದ್ದಿಒನ್,ಮಂಡ್ಯ,ಮೇ.22 : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಬಲಮುರಿ ಬಳಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಮೈಸೂರಿನ ಖಾಸಗಿ ಕಂಪನಿಯ ಇಬ್ಬರು ಯುವ ಉದ್ಯೋಗಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಚಾಮರಾಜನಗರ ಜಿಲ್ಲೆಯ ತಮರವಾಡಿ ಗ್ರಾಮದ ಮೋಹನ್ ಕುಮಾರ್ (21) ಮತ್ತು ಮೈಸೂರು ತಾಲೂಕಿನ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಮೃತಪಟ್ಟ ದುರ್ದೈವಿಗಳು. ಇವರಿಬ್ಬರೂ ಮೈಸೂರಿನ ‘ಕೇನ್ಸ್ ಟೆಕ್ನಾಲಜಿ’ ಸಂಸ್ಥೆಯಲ್ಲಿ ಇತ್ತೀಚೆಗಷ್ಟೇ ವೃತ್ತಿ ಜೀವನ ಆರಂಭಿಸಿದ್ದರು.

ವಾರಾಂತ್ಯದ ರಜೆ ಮಜಾ ಕಳೆಯಲು ಮೋಹನ್ ಕುಮಾರ್ ಮತ್ತು ರವಿಚಂದ್ರ ತಮ್ಮ ಮತ್ತೊಬ್ಬ ಸ್ನೇಹಿತ ವಿಕಾಸ್ ಎಂಬುವವರ ಜೊತೆ ಬಲಮುರಿಗೆ ಆಗಮಿಸಿದ್ದರು. ನದಿಯ ಸೌಂದರ್ಯಕ್ಕೆ ಮಾರುಹೋಗಿ ಈಜಲು ಇಳಿದ ಇಬ್ಬರು ಯುವಕರು, ನೀರಿನ ಆಳ ಹಾಗೂ ಸುಳಿಯ ಅರಿವಿಲ್ಲದೆ ಸಿಲುಕಿ ಮುಳುಗಲಾರಂಭಿಸಿದ್ದಾರೆ. ದಂಡೆಯ ಮೇಲಿದ್ದ ವಿಕಾಸ್ ಕೂಗಾಟ ಕೇಳಿ ಸ್ಥಳೀಯ ರೈತರು ಧಾವಿಸಿದರೂ ಅಷ್ಟರಲ್ಲಾಗಲೇ ಇಬ್ಬರೂ ಜಲಸಮಾಧಿಯಾಗಿದ್ದರು.

ಮಾಹಿತಿ ತಿಳಿಯುತ್ತಿದ್ದಂತೆ ಕೆಆರ್ ಸಾಗರ (KRS) ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯ ಈಜುಗಾರರ ನೆರವಿನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದರು. ಕೆಲವು ಗಂಟೆಗಳ ಹುಡುಕಾಟದ ಬಳಿಕ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಆರ್ ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now