ಕನ್ಹಯ್ಯಲಾಲ್ ಕೊಲೆಗಾರರಿಗೆ ತರಬೇತಿ ನೀಡಿದವರು ಯಾರು ಗೊತ್ತಾ..?

ಕನ್ಹಯ್ಯಾಲಾಲ್ ಹತ್ಯೆಯ ನಂತರ ರಾಜಸ್ಥಾನದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಕನ್ಹಯ್ಯ ಅವರ ಅಂತ್ಯಕ್ರಿಯೆಗೆ ಸಾವಿರಾರು ಜನರು ಜಮಾಯಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಕೂಡ ನಡೆಯಿತು. ಇದೀಗ ಈ ವಿಷಯಕ್ಕೆ ಪಾಕಿಸ್ತಾನದ ಸಂಬಂಧ ಮುನ್ನೆಲೆಗೆ ಬಂದಿದೆ.

ಮಂಗಳವಾರ ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಎಂಬ ಟೈಲರ್‌ನನ್ನು ಇಬ್ಬರು ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ. ಈ ಭೀಕರ ಹತ್ಯೆಯು ಮರುಭೂಮಿ ರಾಜ್ಯ ರಾಜಸ್ತಾನದಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಹೀಗಾಗಿ ಅಲ್ಲಿ ಶಾಂತಿಯನ್ನು ಕಾಪಾಡಲು ಒಂದು ತಿಂಗಳ ಕಾಲ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.

ಮೊಹಮ್ಮದ್ ರಿಯಾಜ್ ಮತ್ತು ಘೌಸ್ ಮೊಹಮ್ಮದ್ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿದ್ದವರಾಗದ್ದಾರೆ. ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಟೈಲರ್‌ ಮಾಡಿದ್ದರು. ನಂತರ ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಅಪರಾಧವನ್ನು ಒಪ್ಪಿಕೊಳ್ಳುವ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ನಂತರ ಬಂಧಿಸಲಾದ ಇಬ್ಬರೂ ಆರೋಪಿಗಳು ಪಾಕಿಸ್ತಾನ ಮೂಲದ ದಾವತ್-ಎ-ಇಸ್ಲಾಮಿನೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *