ನವದೆಹಲಿ: ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ.
ಕಳೆದ ವರ್ಷ ಮಹಾರಾಷ್ಟ್ರದಲ್ಲಿ ರಾಜ್ಯಪಾಲರು ಬದಲಾವಣೆಯಾಗುವುದಕ್ಕೆ ಕಾರಣವಾದ ರಾಜಕೀಯ ಬಿಕ್ಕಟ್ಟು ಕುರಿತು ಎರಡು ಕಡೆಯಿಂದ ಅರ್ಜಿ ಸಲ್ಲಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇಂದು ತೀರ್ಪು ಪ್ರಕಟಿಸಿದೆ. ಇದರ ಜೊತೆಗೆ ಅಂತರ್ ಮತ್ತು ಪಕ್ಷದೊಳಗಿನ ಭಿನ್ನಾಭಿಪ್ರಾಯವನ್ನು ಬಗೆಹರಿಸಲು ಫ್ಲೋರ್ ಟೆಸ್ಟ್ ಅನ್ನು ಮಾಧ್ಯಮವಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿದ ಬಹುಮತ ಸಾಬೀತು ಪಡಿಸು ವ ಕ್ರಿಯೆ ಕೂಡ ಕಾನೂನು ಬದ್ಧವಾಗಿಲ್ಲ. ಉದ್ಧವ್ ಅವರು ಸದನದಲ್ಲಿ ಬಹುಮತವನ್ನು ಕಳೆದುಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ಬಂದ ರಾಜ್ಯಪಾಲ ಕೋಶ್ಯಾರಿ ಅವರು ತಪ್ಪೆಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.