ಉಡುಪಿ ವಿಡಿಯೋ ಪ್ರಕರಣ : ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಚಿತ್ರದುರ್ಗದಲ್ಲಿ ಹಿಂದೂ ಜಾಗರಣ ವೇದಿಕೆ ಮನವಿ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಜು.28) : ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ಮೂರು ವಿದ್ಯಾರ್ಥಿನಿಯರ ಮೇಲೆ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಚಿತ್ರದುರ್ಗ ಜಿಲ್ಲೆಯ ಹಿಂದೂ ಜಾಗರಣ ವೇದಿಕೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಉಡುಪಿಯ ನೇತ್ರಜೋತಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರಾದ ಶಬನಾಜ್, ಅಲ್ಪಿಯಾ ಮತ್ತು ಅಲಿಮತ್ತುಲ್ ಶಾಫಿಯ ಈ ಮೂರು ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳಾದ ಹಿಂದು ವಿದ್ಯಾರ್ಥಿನಿಯರು ಶೌಚಾಲಯ ಬಳಸುವಾಗ ವಿಡಿಯೋ ಮಾಡಿ ತಮ್ಮ ಕೋವಿನ ಹುಡುಗರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ನಮ್ಮ ಹಿಂದು ಹೆಣ್ಣು ಮಕ್ಕಳನ್ನು ಜಿಹಾದಿನ ಬಲೆಗೆ ಬೀಳಿಸುವ ಯತ್ನ ಕಂಡುಬಂದಿದ್ದು, ಇಂತಹ ಆತಂಕಕಾರಿ ಘಟನೆಗಳನ್ನು ತಡೆಗಟ್ಟಲು ಆ ಮೂರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ಮನವಿ ಮಾಡಲಾಯಿತು.

ಈ ವಿಷಯವನ್ನು ಸೂಕ್ತವಾಗಿ ವಿಚಾರಣೆಗೆ ಒಳಪಡಿಸಿ ಇದರ ಹಿಂದಿರುವ ವ್ಯಕ್ತಿಗಳನ್ನು ಆದಷ್ಟು ಬೇಗ ಗುರುತಿಸಿ ಕಠಿಣ ಶಿಕ್ಷೆ ನೀಡಬೇಕಾಗಿ ತತ್ಸಬಂಧ ನಮ್ಮ ಜಿಲ್ಲೆಯಲ್ಲೂ ಕಾಲೇಜು ಹಾಸ್ಟೆಲ್‌ಗಳಲ್ಲಿ ಮೊಬೈಲ್ ಬಳಕೆ ಆ ರೀತಿ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸುತ್ತದೆ.

ಈಗಾಗಲೇ ಮಾಧ್ಯಮಗಳಲ್ಲಿ ಬಂದಂತೆ ಮಕ್ಕಳು ತಮಾಷೆಗಾಗಿ ಶೌಚಾಲಯದಲ್ಲಿ ವಿಡಿಯೋ ಮಾಡಿದ್ದಾರೆ ಎಂಬ ಅಸಡ್ಡೆ ಹೇಳಿಕೆಯನ್ನು ನೀಡುವುದರ ಮೂಲಕ ಗೃಹ ಸಚಿವರು ಈ ಪ್ರಕರಣವನ್ನು ದಾರಿ ತಪ್ಪಿಸಲು ಈ ಮೇಲ್ನೋಟಕ್ಕೆ ಕಂಡು ಬಂದಿದ್ದು, ಆದ ಕಾರಣ ಈ ಕೇಸ್ ಅನ್ನು ಸಿಬಿಐ ಅಥವಾ ಎನ್‌ಐಎಗೆ ನೀಡಬೇಕಾಗಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹಿಸುತ್ತದೆ.

ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ವೀರೇಂದ್ರ.ಎಂ.ಎಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *