ಬೆಂಗಳೂರು.ಆಗಸ್ಟ್.24: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶದ ಎರಡನೇ ಸುತ್ತು ಹಾಗೂ ವೈದ್ಯಕೀಯ (Medical) ಮತ್ತು ದಂತ ವೈದ್ಯಕೀಯ (Dental) ಕೋರ್ಸ್ಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ (Provisional) ಫಲಿತಾಂಶವನ್ನು ಪ್ರಕಟಿಸಿದೆ.
ಫಲಿತಾಂಶಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಆಗಸ್ಟ್ 24ರಂದು ಸಂಜೆ 4:00 ಗಂಟೆಯೊಳಗೆ ಪ್ರಾಧಿಕಾರಕ್ಕೆ ಸಲ್ಲಿಸಲು ಸೂಚಿಸಲಾಗಿದೆ.
ಪ್ರವೇಶಕ್ಕೆ ಅವಕಾಶವಿಲ್ಲ: ಇದು ಕೇವಲ ತಾತ್ಕಾಲಿಕ ಹಂಚಿಕೆಯಾಗಿದ್ದು, ಈ ಹಂತದಲ್ಲಿ ಅಭ್ಯರ್ಥಿಗಳು ತಮಗೆ ಹಂಚಿಕೆಯಾಗಿರುವ ಕಾಲೇಜುಗಳಿಗೆ ತೆರಳಿ ಪ್ರವೇಶ (Admission) ಪಡೆಯಲು ಅವಕಾಶವಿರುವುದಿಲ್ಲ.
ಅಂತಿಮ ಫಲಿತಾಂಶ: ಅಭ್ಯರ್ಥಿಗಳು ಸಲ್ಲಿಸುವ ಆಕ್ಷೇಪಣೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದ ಬಳಿಕವಷ್ಟೇ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ (ಐಎಎಸ್) ಅವರು ಸ್ಪಷ್ಟಪಡಿಸಿದ್ದಾರೆ.
#UGNEET-26 #UGCET-2026: ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್ ಗಳ ಎರಡನೇ ಸುತ್ತು ಹಾಗೂ: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು #KEA ಪ್ರಕಟಿಸಿದೆ.
ಆಕ್ಷೇಪಣೆಗಳು ಇದ್ದಲ್ಲಿ ಆ.24ರಂದು ಸಂಜೆ 4ಗಂಟೆಯೊಳಗೆ ಸಲ್ಲಿಸಬೇಕು.
ಇದು ತಾತ್ಕಾಲಿಕ… pic.twitter.com/7AbTjVL5CF
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 23, 2026











