ನವದೆಹಲಿ; ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ತುಟ್ಟಿ ಭತ್ಯೆ ಹೆಚ್ಚಳಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಯುಗಾದಿಯ ವಿಶೇಷ ಸಿಹಿಯನ್ನ ನೀಡಿದೆ. ಶೇಕಡ 2ರಷ್ಟು ಡಿಎ ಹೆಚ್ಚಳವನ್ನು ಮಾಡಿದೆ. ಇದು ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ನೀಡಿದೆ.

ಡಿಎ ಹೆಚ್ಚಳ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ಮೂಲಕ ಶೇಕಡ 53ರಿಂದ ಶೇಕಡ 55ರವರೆಗೂ ಏರಿಕೆ ಮಾಡಲಾಗಿದೆ. ಈ ಏರಿಕೆಯ ಲಾಭವನ್ನು ಪಿಂಚಣಿದಾರರು ಹಾಗೂ ಕೇಂದ್ರ ಸರ್ಕಾರಿ ನೌಕರರು ಪಡೆಯಲಿದ್ದಾರೆ. ಯುಗಾದಿ ಹಬ್ಬದ ಸಮಯದಲ್ಲಿಯೇ ಕೇಂದ್ರ ಸರ್ಕಾರ ಈ ಖುಷಿ ಸುದ್ದಿಯನ್ನ ನೀಡಿದೆ.


