ದಾವಣಗೆರೆ, ಆ.25 : ದಾವಣಗೆರೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಮಿನಲ್ ಚಟುವಟಿಕೆ ತಡೆಗಟ್ಟುವುದು, ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತದೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಿರುವುದರಿಂದ ಹಾದು ಹೋಗಿರುವುದರಿಂದ ಹೆಚ್ಚು ಅಪಘಾತ ಸಂಭವಿಸುತ್ತದೆ, ಅಪಘಾತಗಳ ತಡೆಗೆ ಕ್ರಮ ಕೈಗೊಳ್ಳಲಾಗುತ್ತದೆ.
ಪೊಲೀಸರ ಜನಸ್ನೇಹಿಯಾಗಿರುಲು ಕ್ರಮ ಕೈಗೊಂಡು ಎಲ್ಲರ ಸಹಕಾರದೊಂದಿಗೆ ಉತ್ತಮ ಕೆಲಸ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು. ಈ ವೇಳೆ ಈ ಹಿಂದಿನ ಎಸ್.ಪಿ ಆಗಿದ್ದ ಡಾ.ಅರುಣ್ ಕೆ ಅವರು ಅಧಿಕಾರ ಹಸ್ತಾಂರಿಸಿ ಶುಭ ಕೋರಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











