Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಉಮೇಶ್ ಮೇಟಿ, ಸಮರ್ಥ ಶಾಮನೂರು

---Advertisement---

ಸುದ್ದಿಒನ್,ಬೆಂಗಳೂರು,ಮೇ.14: ವಿಧಾನಸೌಧವು ಇಂದು ನೂತನ ಶಾಸಕರ ಪದಗ್ರಹಣಕ್ಕೆ ಸಾಕ್ಷಿಯಾಯಿತು. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಉಮೇಶ್ ಮೇಟಿ ಹಾಗೂ ಸಮರ್ಥ ಶಾಮನೂರು ಅವರು ಇಂದು ಅಧಿಕೃತವಾಗಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗಂಭೀರ ಹಾಗೂ ಸಂಪ್ರದಾಯಬದ್ಧ ಸಮಾರಂಭದಲ್ಲಿ, ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ನೂತನ ಶಾಸಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಬಾಗಲಕೋಟೆ ಕ್ಷೇತ್ರದ ನೂತನ ಶಾಸಕ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ ಶಾಮನೂರು ಇಬ್ಬರೂ ನಾಯಕರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸದನದ ಸದಸ್ಯರಾಗಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷರು ನೂತನ ಶಾಸಕರನ್ನು ಅಭಿನಂದಿಸಿ, ಸದನದ ಕಲಾಪಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡು ಜನರ ಧ್ವನಿಯಾಗಿ ಕೆಲಸ ಮಾಡಿ ಎಂದು ಹಾರೈಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now