Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಅನಧಿಕೃತ ಗೈರು: ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

---Advertisement---

ಚಿತ್ರದುರ್ಗ :  ಜೂ.25: ಪದೇ ಪದೇ ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯ ನಿರ್ಲಕ್ಷತೆ ತೋರಿದ ಕಾರಣಕ್ಕಾಗಿ ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕ ಟಿ.ಎನ್.ವಿನಯ್ ಕುಮಾರ್ ಹಾಗೂ ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-2 ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಎನ್.ರಂಗಸ್ವಾಮಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶಿಸಿದ್ದಾರೆ.

ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕ ಟಿ.ಎನ್.ವಿನಯ್ ಕುಮಾರ್ ಅವರು ರಜೆಯ ಅರ್ಜಿಯನ್ನು ಸಲ್ಲಿಸದೇ ಮೇಲಾಧಿಕಾರಿಗಳ ಅನುಮತಿಯನ್ನು ಪಡೆಯದೇ ಕಚೇರಿಗೆ ಅನಧಿಕೃತವಾಗಿ ಗೈರು ಹಾಜರಾಗಿ ಕಚೇರಿಯ ದೈನಂದಿನ ಕೆಲಸ ಕಾರ್ಯಗಳಿಗೆ ಅಡಚಣೆಯನ್ನುಂಟು ಮಾಡಿರುತ್ತಾರೆ. ಹೀಗಾಗಿ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವರದಿ ಸಲ್ಲಿಸಿರುತ್ತಾರೆ. ಇದರನ್ವ ದ್ವಿದಸ ಟಿ.ಎನ್.ವಿನಯ್ ಕುಮಾರ್ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-2) ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಎನ್.ರಂಗಸ್ವಾಮಿ ಅವರು, ಹಲವು ಬಾರಿ ಕರ್ತವ್ಯಕ್ಕೆ ಮೇಲಾಧಿಕಾರಿಗಳ ಪೂರ್ವಾನುಮತಿ ಇಲ್ಲದೇ ಗೈರು ಹಾಜರಾಗುತ್ತಿದ್ದು, ಈ ಕುರಿತು ಹಲವಾರು ಬಾರಿ ಕಾರಣ ಕೇಳಿ ನೋಟಿಸ್‍ಗಳನ್ನು ನೀಡಲಾಗಿದ್ದರೂ ಸಹ ಸಮಂಜಸವಾದ ಉತ್ತರ ನೀಡದೆ 2025ರ ಮೇ 14 ರಿಂದ ಜೂನ್ 10 ರವರೆಗೆ ಪೂರ್ವಾನುಮತಿ ಇಲ್ಲದೆ ಕರ್ತವ್ಯಕ್ಕೆ ಗೈರು ಹಾಜರಾಗಿರುತ್ತಾರೆ. ಹೀಗಾಗಿ ಇವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ವರದಿ ಸಲ್ಲಿಸಿರುತ್ತಾರೆ. ಇದರನ್ವಯ ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-2) ಕಚೇರಿಯ ದ್ವಿದಸ ಎನ್.ರಂಗಸ್ವಾಮಿ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಹಾಗೂ ನಿಯಮಾನುಸಾರ ಜೀವನಾಧಾರ ಭತ್ಯೆಗೆ ಅರ್ಹರಿರುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment