Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Facebook
Twitter
Telegram
WhatsApp

ಕುರುಗೋಡು. (ಜ.07) : ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ ರಸ್ತೆಯ ಬದಿಯಲ್ಲಿ ನಿಂತಿದ್ದ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಭಟ್ರಳ್ಳಿ ಗ್ರಾಮದ ಬಳಿ ಶನಿವಾರ ಜರುಗಿದೆ.

ಸಿರುಗುಪ್ಪ ತಾಲ್ಲೂಕಿನ ಕರೂರು ಗ್ರಾಮದ ಕೆ.ಎಚ್. ಹರ್ಷವರ್ಧನ (22) ಮೃತರು. ಅವರ ಜತೆಯಲ್ಲಿ ನಿಂತಿದ್ದ ವಸಂತರಾಜ ಮತ್ತು ರವಿಚಂದ್ರ ಇವರಿಗೆ ಗಾಯಗಳಾಗಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರೂರು ಗ್ರಾಮ ದಿಂದ ಬಳ್ಳಾರಿಗೆ ತೆರಳುವ ಸಂದರ್ಭದಲ್ಲಿ ಬೈಕ್ ಕೆಟ್ಟುನಿಂತ ಪರಿಣಾಮ ಮೂವರು ರಸ್ತೆಬದಿಯಲ್ಲಿ ನಿಂತಿದ್ದರು. ಸಿರುಗುಪ್ಪ ಕಡೆಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಅಪರಾಧ ವಿಭಾಗದ ಪಿಎಸ್‌ಐ ಲೋಕರಾಜ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!