Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

2025 ಕೇಂದ್ರ ಬಜೆಟ್ : RSS ಕಡೆಯಿಂದ ಸಲಹೆ.. ನಿರೀಕ್ಷೆಗಳೇನು..?

---Advertisement---

2025 ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಾಗೇ ಜನರ ನಿರೀಕ್ಷೆಯೂ ಜಾಸ್ತಿ ಇದೆ. ಎಲ್ಲಾ ಕ್ಷೇತ್ರಗಳಲ್ಲೂ ನಿರೀಕ್ಷೆ ಮಾಡಲಾಗುತ್ತಿದೆ. ಮೋದಿ 3.0 ಸಾಮಾನ್ಯವಾಗಿಯೇ ನಿರೀಕ್ಷೆಯನ್ನ ಹೆಚ್ಚಿಸಿದೆ. ಅದರಂತೆ ಆರ್ ಎಸ್ ಎಸ್ ಕೂಡ ನಿರೀಕ್ಷೆ ಮಾಡುತ್ತಿದೆ. ಶಿಕ್ಷಣ ಮತ್ತು ಕೌಶಲ್ಯ ತರಬೇತಿಗೆ ಹೆಚ್ಚಿನ ಹಣ ನೀಡಬೇಕು,ಬಸಣ್ಣ ಉದ್ದಿಮೆಗಳಿಗೆ ಪಿಎಲ್ಐನಂತಹ ಯೋಜನೆಗಳಿಂದ ಉತ್ತೇಜನ ನೀಡಬೇಕು ಎನ್ನುವ ಸಲಹೆಗಳನ್ನು ಸಂಘ ಪರಿವಾರದ ವಿವಿಧ ಸಂಘಟನೆಗಳು ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ನೀಡಿವೆ.

ಈಗಾಗಲೇ ಸಂಘ ಪರಿವಾರದ ಹಲವು ಸಂಘಟನೆಗಳು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿದ್ದು, ತಮ್ಮ ನಿರೀಕ್ಷೆಗಳ ಬಗ್ಗೆ ಮನವಿ ಮಾಡಿದ್ದಾರೆ. ದೊಡ್ಡಮಟ್ಟದ ಸುಧಾರಣಾ ಕ್ರಮಗಳು, ತೆರಿಗೆ ಸಂಗ್ರಹ, ಆದಾಯ ಹೆಚ್ಚಳ ಇತ್ಯಾದಿ ಕಾರ್ಯಗಳು ಇಂದಿನ ಸಂದರ್ಭದಲ್ಲಿ ಬಹಳ ಮುಖ್ಯ ಎಂಬುದನ್ನು ಆರ್ ಎಸ್ ಎಸ್ ಕೂಡ ಒಪ್ಪುತ್ತದೆ. ಆದರೆ ಮಧ್ಯಮವರ್ಗದವರ ಮೇಲಿನ ತೆರಿಗೆಯನ್ನು ಇಳಿಸುವುದು ಕೂಡ ಬಹಳ ಮುಖ್ಯ. ಸ್ಥಳೀಯ ಸಣ್ಣ ಉದ್ದಿಮೆಗಳು ಬೆಳೆಯಬೇಕು. ಸರ್ಕಾರಿ ಉದ್ದಿಮೆಗಳ ಖಾಸಗೀಕರಣ ಅತಿಯಾಗಿ ಆಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಹೀಗೆ ಹಲವು ಬೇಡಿಕೆಗಳನ್ನ ಆರ್ ಎಸ್ ಎಸ್ ಇಟ್ಟಿದೆ.

ಇನ್ನು ಮಧ್ಯಮ ವರ್ಗದವರು, ರೈತಾಪಿ ವರ್ಗದವರು ಕೂಡ ಕೇಂದ್ರ ಬಜೆಟ್ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆಯನ್ನ ಇಟ್ಟುಕೊಂಡಿದ್ದಾರೆ. ಈ ಬಾರಿ ಮೋದಿ ಸರ್ಕಾರ ಯಾರಿಗೆ..? ಏನೆಲ್ಲಾ ಉಡುಗೊರಡಗಳನ್ನ ಕೊಡುತ್ತೆ ಎಂಬುದನ್ನು ಕಾದು ನೋಡಬೇಕಿದೆ. ಇಡೀ ದೇಶದ ಜನರು ಕೂಡ ಈ ಬಾರಿಯ ಬಜೆಟ್ ನತ್ತ ಗಮನ ಹರಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment