Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಫೆಬ್ರವರಿ 1 ರಂದೇ ಕೇಂದ್ರ ಬಜೆಟ್ ಮಂಡನೆ

---Advertisement---

ನವದೆಹಲಿ: 2025-26 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 1ರಂದು ಬಜೆಟ್ ಮಂಡನೆಗೆ ದಿನಾಂಕವನ್ನ ನಿಗದಿ ಮಾಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಈ ಬಾರಿಯೂ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ದಾಖಲೆಯ ಪೂರ್ವಗಾಮಿಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಜನವರಿ 28ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಮಂಡನೆ ಮಾಡಲಿದ್ದಾರೆ.

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮಾ ಇದಕ್ಕೆ ಅನುಮೋದನೆ ನೀಡಿದ್ದಾರೆ. ರಾಷ್ಟ್ರಪತಿಗಳು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನ್ನಾಡಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ಹಂತವು ಫೆಬ್ರವರಿ 13ರಂದು ಮುಕ್ತಾಯಗೊಳ್ಳಲಿದೆ‌. ಎರಡನೇ ಹಂತವು ಮಾರ್ಚ್ 9ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ಮುಂದುವರೆಯಲಿದೆ.

ಬಜೆಟ್ ವಿಚಾರ ಬಂದಾಗ ಸಾಮಾನ್ಯವಾಗಿಯೇ ಸಾರ್ವಜನಿಕರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಕೇಂದ್ರದಿಂದ ಒಂದಷ್ಟು ನೀತಿಗಳು ಬದಲಾದರೆ, ಬೆಲೆಗಳು, ಟ್ಯಾಕ್ಸ್ ಗಳು ಕಡಿಮೆಯಾದಾಗ ಮಧ್ಯಮ ವರ್ಗದ ಮಂದಿ ಸಮಾಧಾನಕರವಾದ ಜೀವನವನ್ನಾದರೂ ಮಾಡಬಹುದಾಗಿರುತ್ತದೆ. ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ನಡೆಯಲಿವೆ. ಸಾರ್ವಜನಿಕರು, ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು ಮತ್ತು ತೆರಿಗೆದಾರರು ಎಲ್ಲರೂ ಈ ಬಜೆಟ್ ಬಗ್ಗೆ ಬಹಳ ಕಾತುರ ಇಟ್ಟುಕೊಂಡಿದ್ದಾರೆ. ನಿರ್ಮಲಾ ಸೀತರಾಮನ್ ಭಾನುವಾರ ಬಜೆಟ್ ಮಂಡನೆ ಮಾಡಲಿದ್ದು, ಎಲ್ಲರ ಗಮನ ಆ ಕಡೆಗೆ ನೆಟ್ಟಿದೆ. ಅದಾದ ನಂತರ ಬಜೆಟ್ ಮೇಲಿನ ಚರ್ಚೆಗಳು ಆರಂಭವಾಗಲಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now