ನವದೆಹಲಿ: 2025-26 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 1ರಂದು ಬಜೆಟ್ ಮಂಡನೆಗೆ ದಿನಾಂಕವನ್ನ ನಿಗದಿ ಮಾಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಈ ಬಾರಿಯೂ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ದಾಖಲೆಯ ಪೂರ್ವಗಾಮಿಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಜನವರಿ 28ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಮಂಡನೆ ಮಾಡಲಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮಾ ಇದಕ್ಕೆ ಅನುಮೋದನೆ ನೀಡಿದ್ದಾರೆ. ರಾಷ್ಟ್ರಪತಿಗಳು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನ್ನಾಡಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ಹಂತವು ಫೆಬ್ರವರಿ 13ರಂದು ಮುಕ್ತಾಯಗೊಳ್ಳಲಿದೆ. ಎರಡನೇ ಹಂತವು ಮಾರ್ಚ್ 9ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ಮುಂದುವರೆಯಲಿದೆ.
ಬಜೆಟ್ ವಿಚಾರ ಬಂದಾಗ ಸಾಮಾನ್ಯವಾಗಿಯೇ ಸಾರ್ವಜನಿಕರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಕೇಂದ್ರದಿಂದ ಒಂದಷ್ಟು ನೀತಿಗಳು ಬದಲಾದರೆ, ಬೆಲೆಗಳು, ಟ್ಯಾಕ್ಸ್ ಗಳು ಕಡಿಮೆಯಾದಾಗ ಮಧ್ಯಮ ವರ್ಗದ ಮಂದಿ ಸಮಾಧಾನಕರವಾದ ಜೀವನವನ್ನಾದರೂ ಮಾಡಬಹುದಾಗಿರುತ್ತದೆ. ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ನಡೆಯಲಿವೆ. ಸಾರ್ವಜನಿಕರು, ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು ಮತ್ತು ತೆರಿಗೆದಾರರು ಎಲ್ಲರೂ ಈ ಬಜೆಟ್ ಬಗ್ಗೆ ಬಹಳ ಕಾತುರ ಇಟ್ಟುಕೊಂಡಿದ್ದಾರೆ. ನಿರ್ಮಲಾ ಸೀತರಾಮನ್ ಭಾನುವಾರ ಬಜೆಟ್ ಮಂಡನೆ ಮಾಡಲಿದ್ದು, ಎಲ್ಲರ ಗಮನ ಆ ಕಡೆಗೆ ನೆಟ್ಟಿದೆ. ಅದಾದ ನಂತರ ಬಜೆಟ್ ಮೇಲಿನ ಚರ್ಚೆಗಳು ಆರಂಭವಾಗಲಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















