Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ-ಗುಂತಕಲ್ ನೂತನ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು!

---Advertisement---

ದೆಹಲಿ.ಜುಲೈ.25: ಕರ್ನಾಟಕ ಮತ್ತು ನೆರೆಯ ಆಂಧ್ರಪ್ರದೇಶ ರಾಜ್ಯಗಳ ನಡುವೆ ಸುಲಭ ಸಂಪರ್ಕ ಕಲ್ಪಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡಿದೆ. ₹1,264 ಕೋಟಿ ಬೃಹತ್ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಬಳ್ಳಾರಿ – ಗುಂತಕಲ್ ಹೊಸ ರೈಲು ಮಾರ್ಗ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಸಂಪುಟವು ಅಧಿಕೃತ ಅನುಮೋದನೆ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಈ ಮಹತ್ವಾಕಾಂಕ್ಷಿ ಯೋಜನೆಯು ಉಭಯ ರಾಜ್ಯಗಳ ಗಡಿ ಭಾಗದ ಜನರಿಗೆ ಆಶಾಕಿರಣವಾಗಲಿದ್ದು, ಪ್ರಾದೇಶಿಕ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ. ಒಟ್ಟು 46 ಕಿಲೋಮೀಟರ್ಗಳಷ್ಟು ನೂತನ ರೈಲು ಜಾಲ ವಿಸ್ತರಣೆಯಾಗಲಿದ್ದು, ಗಡಿ ಭಾಗದ ಸುಮಾರು 99 ಗ್ರಾಮಗಳಿಗೆ ನೇರ ರೈಲು ಸಂಪರ್ಕದ ಭಾಗ್ಯ ಸಿಗಲಿದೆ. ಪರಿಣಾಮವಾಗಿ ಕನಿಷ್ಠ 7 ಲಕ್ಷಕ್ಕೂ ಅಧಿಕ ಜನಸಂಖ್ಯೆಗೆ ಇದರ ಪ್ರತ್ಯಕ್ಷ ಹಾಗೂ ಪರೋಕ್ಷ ಪ್ರಯೋಜನ ದೊರೆಯಲಿದೆ.

 

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ (ಎಕ್ಸ್)ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಳ್ಳಾರಿ-ಗುಂತಕಲ್ ವಿಭಾಗದಲ್ಲಿ 3ನೇ ಮತ್ತು 4ನೇ ರೈಲು ಮಾರ್ಗಗಳ ನಿರ್ಮಾಣಕ್ಕೆ ಸಂಪುಟ ನೀಡಿರುವ ಅನುಮೋದನೆಯು, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಸಂಪರ್ಕ ಹಾಗೂ ಸಾಗಾಣಿಕೆ ಸಾಮರ್ಥ್ಯವನ್ನು ಬಲಪಡಿಸಲಿದೆ.

ಇದು ಪ್ರಯಾಣಿಕರ ಸುಗಮ ಸಂಚಾರವನ್ನು ಹೆಚ್ಚಿಸಲಿದ್ದು, ಪ್ರಮುಖ ಉತ್ಪನ್ನಗಳ ಪರಿಣಾಮಕಾರಿ ಸಾಗಣೆಗೆ ಬೆಂಬಲ ನೀಡಲಿದೆ. ಜೊತೆಗೆ, ಇದು ಪ್ರಮುಖ ಸಾಂಸ್ಕೃತಿಕ ಮತ್ತು ಪ್ರವಾಸಿ ತಾಣಗಳಿಗೆ ತಲುಪುವ ಸಂಪರ್ಕವನ್ನು ಸುಧಾರಿಸಿ, ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ತಿಳಿಸಿದ್ದಾರೆ.

Join WhatsApp

Join Now

Join Telegram

Join Now