ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಇಂದು ಚಿತ್ರದುರ್ಗಕ್ಕೆ ಭೇಟಿ : ಹಲವು ಕಾರ್ಯಕ್ರಮಗಳಲ್ಲಿ ಭಾಗಿ

1 Min Read

 

ಸುದ್ದಿಒನ್, ಚಿತ್ರದುರ್ಗ, ಸೆ.23: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಇದೇ ಸೆಪ್ಟೆಂಬರ್ 24ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಸೆ.24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಹಳೇಮಾಧ್ಯಮಿಕ ಶಾಲಾ ಆವರಣದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ (ದಿವ್ಯಾಂಗಜನ್), ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಕೋ), ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ಸಾಮಾಜಿಕ ಅಧಿಕಾರಿತಾ ಶಿಬಿರ-ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟನೆ ನೆರವೇರಿಸುವರು.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಘನ ಉಪಸ್ಥಿತಿವಹಿಸುವರು.  ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ ಗೌಡ, ಕೆ.ಎಸ್.ನವೀನ್ ಭಾಗವಹಿಸುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *