Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು ಕಲ್ಲು ಕ್ವಾರಿ ದುರಂತದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ : ಕೇಂದ್ರ ಸಚಿವ ಹೆಚ್‌ ಡಿಕೆ ಒತ್ತಾಯ

---Advertisement---

ಬೆಂಗಳೂರು.ಜುಲೈ.02: ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ಮೃತಪಟ್ಟಿದ್ದು, ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಅಂತ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ರಾಜ್ಯ ಸರಕಾರ ನೊಂದ ಕುಟುಂಬ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವುದರ ಜತೆಗೆ ಇನ್ನಿತರ ತುರ್ತು ನೆರವು ಒದಗಿಸಬೇಕು. ಜತೆಗೆ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ಕ್ರಮ ವಹಿಸಿ ಸಂಬಂಧಿತ ಇಲಾಖೆ ತೀವ್ರ ನಿಗಾ ಇರಿಸುವಂತೆ ಆದೇಶಿಸಬೇಕು. ಇಂಥ ಕಠಿಣ ಕ್ರಮಗಳು ಆಗದಿರುವ ಕಾರಣಕ್ಕೆ ಈ ರೀತಿಯ ದುರಂತಗಳು ಮರುಕಳಿಸುತ್ತಿವೆ. ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೆಯೂ ಕ್ರಮ ಆಗಿಲ್ಲ ಎನ್ನುವುದು ಅತ್ಯಂತ ಬೇಸರದ ಸಂಗತಿ. ಕ್ವಾರಿ ಮಾಲೀಕರು ಕೂಡ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Join WhatsApp

Join Now

Join Telegram

Join Now