ಬೆಂಗಳೂರು; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತೆ ಅನಾರೋಗ್ಯ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಪ್ರಯಾಣದ ಪ್ಲ್ಯಾನ್ ಗಳನ್ನು ರದ್ದು ಮಾಡಿದ್ದಾರೆ. ಇಂದಿನ ಸಂಸತ್ ಅಧಿವೇಶನದಲ್ಲೂ ಭಾಗಿಯಾಗಬೇಕಿತ್ತು. ಆದರೆ ಅನಾರೋಗ್ಯದ ಹಿನ್ನೆಲೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿಕೊಂಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತೀವ್ರ ಕಫ ಹಾಗೀ ಕೆಮ್ಮು ಹೆಚ್ಚಾಗಿದೆ. ಹೀಗಾಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದಾರೆ.
ಕಳೆದ ಮೂರ್ನಾಲ್ಕು ದಿನದಿಂದ ತುಮಕೂರು ರಸ್ತೆಯಲ್ಲಿರುವ ಜಿಂದಾಲ್ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಕಫ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಸದ್ಯ ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆಯಾಗಿದೆ ಎಂದೇ ಹೇಳಲಾಗುತ್ತಿದೆ. ಕಫ, ಕೆಮ್ಮು ವಿಚಾರಕ್ಕೆ ಕುಮಾರಸ್ವಾಮಿ ಅವರು ಚೆನ್ನೈಗೆ ತೆರಳಿ ಚಿಕಿತ್ಸೆಯನ್ನ ಪಡೆದುಕೊಂಡಿದ್ದರು. ಆದರೆ ಅಲ್ಲಿ ಅಷ್ಟಾಗಿ ಆರೋಗ್ಯ ಸುಧಾರಣೆಯಾಗಿಲ್ಲ. ಜೊತೆಗೆ ಕಫ, ಕೆಮ್ಮು ಕೂಡ ಕಡಿಮೆಯಾಗಿಲ್ಲ. ಹೀಗಾಗಿ ಜಿಂದಾಲ್ ನ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಮಹಿಳಾ ದಿನಾಚರಣೆಯ ಕಾರ್ಯಕ್ರಮಕ್ಕೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರಾಗಿದ್ದರು. ಹಾಗೇ ಇಂದು ದೆಹಲಿಗೆ ಪ್ರಯಾಣ ಬೆಳೆಸುವುದಕ್ಕೆ ಕಾರ್ಯಕ್ರಮ ಸಿದ್ಧವಾಗಿತ್ತು. ಆದರೆ ಪ್ರಯಾಣವನ್ನು ರದ್ದು ಮಾಡಿಕೊಂಡಿದ್ದರು. ಈಗ ಕೊಂಚ ಆರೋಗ್ಯದಲ್ಲಿ ಸುಧಾರಣೆ ಕಂಡಿರೊ ಕಾರಣ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮತ್ತೆ ದೆಹಲಿಗೆ ಹೋಗುವ ಸಾಧ್ಯತೆ ಇದೆ. ಇನ್ನು ಕೇಂದ್ರ ಸಚುವರಾದ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಕ್ಕಾಪಟ್ಟೆ ಓಡಾಟ ನಡೆಸಿದ್ದರು. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪ್ರತ್ಯೇಕ ಭೇಟಿ ನೀಡಿ ಜನರ ಸಮಸ್ಯೆಗಳ ಬಗ್ಗೆ ಕೇಳುತ್ತಿದ್ದರು. ವಿಶ್ರಾಂತಿಯೇ ಪಡೆಯದೆ ಓಡಾಡುತ್ತಿದ್ದದ್ದು ಅವರ ಅನಾರೋಗ್ಯಕ್ಕೆ ಕಾರಣವಾಗಿತ್ತು.
ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…
ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…
ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…
ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…