Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ; ಅವರ ಆಸ್ತಿಗೆ ಬರಲಿದೆ ಬೆಲೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ..!

---Advertisement---

ನವದೆಹಲಿ; ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿಯೇ ತೀರುತ್ತೇನೆಂದು ಪಣ ತೊಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್, ಸರ್ಕಾರದಿಂದಾನೂ ಗ್ರೀನ್ ಸಿಗ್ನಲ್ ಪಡೆದಿದ್ದಾರೆ. ಈ ಸಂಬಂಧ ಇದೀಗ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಆಕ್ರೋಶ ಹೊರ ಹಾಕಿದ್ದಾರೆ. ಅವರ ಜಮೀನುಗಳಿಗೆ ಬೆಲೆ ಇರಬಹುದು. ಅದಕ್ಕಾಗಿ ರಾಮನಗರವನ್ನ ಬೆಂಗಳೂರು ದಕ್ಷಿಣ ಮಾಡಲು ಹೊರಟಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಅಭಿವೃದ್ದಿಯ ದೃಷ್ಟಿಯಲ್ಲಿ ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ಮಾಡಲಾಗಿತ್ತು. ಇದೀಗ ಅವರ ಜಮೀನುಗಳಿಗೆ ಬೆಲೆ ಏರಿಸಿಕೊಳ್ಳುವುದಕ್ಕೆ ಹಾಗೇ ಮಾಡಿರಬಹುದು. ಈ ರಾಜಕಾರಣಕ್ಕೆಲ್ಲ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಕೇಂದ್ರ ಗೃಹ ಸಚಿವರಿಗೆ ಕಳುಹಿಸಲಾಗಿದೆ. ಅವರ ಬಳಿ ಇದು ತಿರಸ್ಕೃತವಾಗಿದೆ. ಅದು ನನಗೆ ಗೊತ್ತಿಲ್ಲ. ಇವರು ಶಾಶ್ವತವಾಗಿ ಇರುತ್ತಾರಾ..? ಮುಂದೆ ಬದಲಾಗಲಿದೆ.ಅದು ನನಗೆ ಗೊತ್ತು.

ಯಾಕೆ ಈಗ ಜಮೀನುಗಳಿಗೆ ಬೆಲೆ ಇಲ್ವಾ..? 40 ವರ್ಷದ ಹಿಂದೆ ಖರೀದಿ ಮಾಡಿದ ಜಮೀನಿಗೆ ಎಸ್ಐಟಿ ಏನೋ ಮಾಡಿದ್ದಾರಲ್ಲ. ನನ್ನ ಮೇಲೆ ಗದಾಪ್ರಹಾರ ಮಾಡ್ತಿದ್ದೀರಲ್ಲಾ, ಉ ರು ಮಾಡಿಕೊಂಡಿದ್ದರಲ್ಲಿ ಶೇಕಡ 50ರಷ್ಟು ಸರ್ಕಾರಿ ಜಮೀನುಗಳಿವೆ. ಇವರು ಮಾಡಿರುವುದು ನಮಗೆ ಗೊತ್ತಿದೆ. ಶಾಂತಿನಗರದ ದಲಿತರ ಜಾಗ ನುಂಗಿದ್ದು ಯಾರು..? ರಾಮಕೃಷ್ಣ ಹೆಗಡೆ ಸರ್ಕಾರದದಲ್ಲಿ ಕೊಟ್ಟ ಜಾಗ ನುಂಗಿದ್ದು ಯಾರು..? ಮುಖ್ಯಮಂತ್ರಿ ಸಿದ್ದರಾಮಯ್ಯ ತಾವೂ ಅಹಿಂದ ಎನ್ನುತ್ತಾರೆ. ದಲಿತರ ಭೂಮಿ ಕಬಳಿಸಿದವರನ್ನೇ ಜೊತೆಯಲ್ಲಿ ಇಟ್ಟುಕೊಂಡಿದ್ದಾರೆ. ಈಗೇನೋ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಅಂತಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment