Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಸಚಿವ ಕುಮಾರಸ್ವಾಮಿರವರ ಹುಟ್ಟುಹಬ್ಬ : ಚಿತ್ರದುರ್ಗದಲ್ಲಿ ವೃದ್ಧರಿಗೆ ಹಾಗೂ ಶಾಲಾ ಮಕ್ಕಳಿಗೆ ಹಣ್ಣುಗಳ ವಿತರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 16 : ಮಾಜಿ ಮುಖ್ಯಮಂತ್ರಿ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿರವರ 66 ನೇ ಹುಟ್ಟುಹಬ್ಬವನ್ನು ಜೆಡಿಎಸ್.ಕಚೇರಿಯಲ್ಲಿ ಮಂಗಳವಾರ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಜೆಡಿಎಸ್. ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮಾತನಾಡಿ ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿರವರು ರೈತರ ಸಾಲ ಮನ್ನ ಮಾಡಿ ಮಣ್ಣಿನ ಮಗ ಎನ್ನುವ ಹೆಸರಿಗೆ ತಕ್ಕಂತೆ ಕೃಷಿಗೆ ಹೆಚ್ಚಿನ ಒತ್ತು ಕೊಟ್ಟಿದ್ದರು. ಭಾಗ್ಯಲಕ್ಷ್ಮಿ ಯೋಜನೆ, ಗ್ರಾಮ ವಾಸ್ತವ್ಯ ಇವುಗಳು ಅವರ ಅಧಿಕಾರವಧಿಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು. ಶಿಕ್ಷಣಕ್ಕೆ ಆದ್ಯತೆ ನೀಡಿದ್ದರು. 2028 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಗಲಿ ಎಂದು ಶುಭ ಹಾರೈಸಿದರು.

ಕೇಂದ್ರ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ರಾಜಕೀಯ ಜೀವನದುದ್ದಕ್ಕೂ ಸರಳತೆಯನ್ನು ಮೈಗೂಡಿಸಿಕೊಂಡಿದ್ದಾರೆ. ಎಂದಿಗೂ ಅಧಿಕಾರದ ದರ್ಪ ಯಾರ ಮೇಲೂ ಚಲಾಯಿಸಿದವರಲ್ಲ. ಅಂತಹ ಸಜ್ಜನ ರಾಜಕಾರಣಿ ಕರ್ನಾಟಕ ರಾಜ್ಯಕ್ಕೆ ಬೇಕಾಗಿರುವುದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜನ ಆಶೀರ್ವದಿಸಿ ಮತ್ತೊಮ್ಮೆ ಅಧಿಕಾರ ನೀಡುವಂತೆ ಎಂ.ಜಯಣ್ಣ ಮನವಿ ಮಾಡಿದರು.

ಉಚ್ಚಂಗಿಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆ ಮಾಡಿಸಿದ ನಂತರ ಕಬೀರಾನಂದಾಶ್ರಮದಲ್ಲಿರುವ ವೃದ್ದರಿಗೆ ಹಾಗೂ ಶಾಲಾ ಮಕ್ಕಳಿಗೆ ಹಣ್ಣುಗಳನ್ನು ವಿತರಿಸಲಾಯಿತು.
ಜೆಡಿಎಸ್.ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿನಾಯಕ, ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಯುವ ಘಟಕದ ಅಧ್ಯಕ್ಷ ಓ.ಪ್ರತಾಪ್‍ಜೋಗಿ, ಚಿದಾನಂದ್, ಶಂಕರಮೂರ್ತಿ, ಎಂ.ಎಸ್.ಮಂಜುನಾಥ್, ನಾಗರಾಜು, ಗೀತಮ್ಮ, ಶಿವಪ್ರಸಾದ್‍ಗೌಡ, ಗೀತ, ಸೋಮು ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now