ಚಿತ್ರದುರ್ಗ. ಆ.29: ಜಿಲ್ಲೆಯ ಚಿತ್ರದುರ್ಗ ಹಾಗೂ ಚಿಕ್ಕಜಾಜೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೈಲ್ವೆ ಮೇಲ್ಸೇತುವೆ (ROB) ಕಾಮಗಾರಿಗಳಿಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇದೇ ಆಗಸ್ಟ್ 30 ರಂದು ಭೂಮಿಪೂಜೆ ನೆರವೇರಿಸಲಿದ್ದಾರೆ.
ಚಿತ್ರದುರ್ಗದ ರೈಲ್ವೆ ಲೆವೆಲ್ ಕ್ರಾಸಿಂಗ್ ಸಂಖ್ಯೆ 22ರ ಬದಲಾಗಿ ನಿರ್ಮಿಸಲಾಗುವ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಬೆಳಿಗ್ಗೆ 11 ಗಂಟೆಗೆ ಹಾಗೂ ಚಿಕ್ಕಜಾಜೂರಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 01 ರ ಬದಲಾಗಿ ನಿರ್ಮಿಸಲಾಗುವ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಮಧ್ಯಾಹ್ನ 2.30 ಗಂಟೆಗೆ ಭೂಮಿಪೂಜೆ ನೆರವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.















