Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪಿಳ್ಳೇಕೆರೇನಹಳ್ಳಿ ಬಳಿ ಅಪರಿಚಿತ ವಾಹನ ಡಿಕ್ಕಿ : ಬಾಲಕ ಮೃತ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 29 : ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬಾಲಕ ಮೃತಪಟ್ಟ ಘಟನೆ ಪಿಳ್ಳೇಕೆರೆನಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ 12.30 ವೇಳೆ ಸಂಭವಿಸಿದೆ.

ಪಿಳ್ಳೇಕರೆನಹಳ್ಳಿಯ ನಂದೀಶ್ (17 ವರ್ಷ) ಮೃತಪಟ್ಟ ಬಾಲಕ. ರಾತ್ರಿ ಸುಮಾರು 12 : 30 ರ ವೇಳೆಗೆ ರಸ್ತೆ ದಾಟುವಾಗ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬಾಲಕ ಮೃತಪಟ್ಟಿದ್ದಾನೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಡಾವಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಘಟನೆಗೆ ಗ್ರಾಮಸ್ಥರ ಆಕ್ರೋಶ : ಅಪಘಾತಕ್ಕೆ ಕಾರಣವಾದ ನಾಪತ್ತೆಯಾದ ವಾಹನ ಪತ್ತೆ ಮಾಡಬೇಕು. ಈ ಮೂಲಕ ಮೃತ ಬಾಲಕನ ಸಾವಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾದ ದಿನದಿಂದಲೂ ಇಲ್ಲಿ ಎಷ್ಟೋ ಅಪಘಾತಗಳು ಸಂಭವಿಸಿ ಸಾಕಷ್ಟು ಜನರು ಮೃತಪಟ್ಟಿದ್ದಾರೆ. ಈ ಹೆದ್ದಾರಿ ಅಕ್ಕಪಕ್ಕದಲ್ಲಿ ಸರ್ಕಾರಿ ಶಾಲೆ, ಖಾಸಗಿ ಶಾಲಾಕಾಲೇಜುಗಳು ಇವೆ. ಇಲ್ಲಿಗೆ ವಿದ್ಯಾಭ್ಯಾಸ ಮಾಡಲು ಸಾವಿರಾರು ಮಕ್ಕಳು ಈ ರಸ್ತೆ ಮೂಲಕ ಹಾದು ಹೋಗಬೇಕಿದೆ. ಆದ್ದರಿಂದ ಗ್ರಾಮಕ್ಕೆ ಅಂಡರ್‌ಪಾಸ್ ನಿರ್ಮಿಸುವಂತೆ ಸುಮಾರು ವರ್ಷಗಳಿಂದ ಮನವಿ ಮಾಡಿದರೂ ಯಾರೊಬ್ಬರೂ ಸ್ಪಂದಿಸುತ್ತಿಲ್ಲ. ಹೆದ್ದಾರಿ ಪ್ರಾಧಿಕಾರದವರು ಕೂಡಾ ನಮ್ಮ ಮನವಿಗೆ ಮನ್ನಣೆ ನೀಡುತ್ತಿಲ್ಲ. ಇನ್ನೂ ಎಲ್ಲಿಯವರೆಗೆ ನಾವು ಇಂತಹ ಸಾವು ನೋವುಗಳನ್ನು ಸಹಿಸಿಕೊಳ್ಳಬೇಕು ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...