ಮಂಡ್ಯ: ಈ ಬಾರಿ ಹಳೇ ಮೈಸೂರು ಭಾಗವನ್ನು ಹೇಗಾದರೂ ಮಾಡಿ ಗೆಲ್ಲಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಹೀಗಾಗಿ ಹಳೆ ಮೈಸೂರು ಭಾಗದಲ್ಲಿ ಘಟಾನುಘಟಿಗಳ ಪ್ರಚಾರ ಶುರುವಾಗಿದೆ. ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಯೋಗಿ ಆದಿತ್ಯನಾಥ್ ರೋಡ್ ಶೋ ನಡೆಸಲಿದ್ದಾರೆ. ಅಲ್ಲಿಂದ ರಾಜೇಂದ್ರ ಪ್ರಸಾದ್ ರಸ್ತೆ, ಅಂಬೇಡ್ಕರ್ ವೃತ್ತ, ನೂರಡಿ ರಸ್ತೆ, ಹೊಸಹಳ್ಳಿ ವೃತ್ತ, ವಿಶ್ವೇಶ್ವರಯ್ಯ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
ರೋಡ್ ಶೋ ಮೂಲಕ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಚುನಾವಣಾ ಅಖಾಡ ಸಿದ್ಧವಾಗಿರುತ್ತದೆ. ಮೇ 10 ಚುನಾವಣೆ ನಡೆದರೆ ಮೇ 13 ರಿಸಲ್ಟ್ ಬಂದಿರುತ್ತೆ. ಈ ಬಾರಿ ಮತದಾರರ ಒಲವು ಯಾವ ಕಡೆ ಇದೆ, ಯಾವ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬುದು ಅಂದೇ ಗೊತ್ತಾಗಲಿದೆ.