ಲಕ್ನೋ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ಮೇಲೆ ಹಲ್ಲೆ ಆರೋಪ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದಾರೆ. ಈ ಹಿಂದೆಯೂ ನನ್ನ ಮೇಲೆ ಹಲವಾರು ಬಾರಿ ದಾಳಿ ನಡೆದಿದೆ. ದೊಣ್ಣೆಯಿಂದ ಹೊಡೆದಿದ್ದಾರೆ. ಆದ್ರೆ ನಾನು ಎಂದಿಗೂ ತಲೆಬಾಗಿಲ್ಲ, ಹೆದರಲ್ಲ ಎಂದಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ಅಬ್ಬರದಿಂದ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಹಲ್ಲೆಯಾಗಿದೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಮಮತಾ ಬ್ಯಾನರ್ಜಿ, ನಾನು ವಾರಾಣಾಸಿಗೆ ಬಂದಾಗ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ಬೆಳವಣಿಗೆ ಬಿಜೆಪಿ ಅಧಿಕಾರ ಕಳೆದುಕೊಳ್ಳುವುದನ್ನು ಸೂಚಿಸುತ್ತದೆ ಎಂದು ಆಕ್ರೋಶ ಹೊರ ಹಾಕಿದರು.