Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2024 ರಲ್ಲಿ ಯುಪಿಎ ಅಧಿಕಾರಕ್ಕೆ ಬರುವುದು ಖಚಿತ : ಸಂಸದ ಕೊಡಿಕುನ್ನಿಲ್ ಸುರೇಶ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಅಗತ್ಯ ವಸ್ತುಗಳ ಬೆಲೆ ಏರಿಸಿ ಜನವಿರೋಧಿ ನೀತಿ ಅನುಸರಿಸುತ್ತಿರುವ ಕೋಮುವಾದಿ ಬಿಜೆಪಿ ವಿರುದ್ದ 2024 ರ ಲೋಕಸಭೆ ಚುನಾವಣೆಗೆ ಸಿದ್ದರಿದ್ದು, ಯುಪಿಎ ಅಧಿಕಾರಕ್ಕೆ ಬರುವುದು ಖಚಿತ ಎಂದು ಲೋಕಸಭೆ ಸದಸ್ಯ ಕಾಂಗ್ರೆಸ್‍ನ ಲೋಕಸಭೆ ಮುಖ್ಯ ಸಚೇತಕ ಕೊಡಿಕುನ್ನಿಲ್ ಸುರೇಶ್ ಹೇಳಿದರು.

ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಯುವ ನೇತಾರ ರಾಹುಲ್‍ಗಾಂಧಿರವರ ಭಾರತ್ ಜೋಡೋ ಯಾತ್ರೆಯಿಂದ ಪಕ್ಷಕ್ಕೆ ಶಕ್ತಿ ಹುರುಪು ತುಂಬಿದಂತಾಗಿದೆ. ವಿರೋಧಿಗಳು ಭಾರತ್ ಜೋಡೋ ಯಾತ್ರೆಯನ್ನು ಭಾರತ್ ತೋಡೋ ಯಾತ್ರೆಯೆಂದು ಟೀಕಿಸಿದ್ದಕ್ಕೆ ನಮ್ಮ ನಾಯಕರುಗಳು ಉತ್ತರ ಕೊಟ್ಟಿದ್ದಾರೆ.

ರಾಹುಲ್‍ಗಾಂಧಿ ಯಾತ್ರೆಯುದ್ದಕ್ಕೂ ಗ್ರಾಮೀಣ ಬಡವರ ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಮುಂದೆ ಪಕ್ಷ ಅಧಿಕಾರಕ್ಕೆ ಬಂದಾಗ ಏನೆಲ್ಲಾ ಯೋಜನೆಗಳನ್ನು ನೀಡಬಹುದೆನ್ನುವುದನ್ನು ಅರಿತುಕೊಂಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ಪಕ್ಷದ ನಾಯಕರುಗಳು ಸಜ್ಜಾಗಿದ್ದು, ಎಲ್ಲೆಡೆ ಮತದಾರರು ಒಲವು ತೋರುತ್ತಿದ್ದಾರೆಂದರು.

ಎಂ.ಎ.ಸೇತೂರಾಂ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಎ.ಐ.ಸಿ.ಸಿ. ವಿದ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿ ಮಮತ ನೇರ್ಲಗಿ, ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಸುಬ್ಬಯ್ಯ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...